Glenn Maxwell: ಸಿಕ್ಸ್ ಸಿಡಿಸಿಯೇ ಫಿಂಚ್ ದಾಖಲೆ ಸರಿಗಟ್ಟಿದ ಮ್ಯಾಕ್ಸ್ವೆಲ್
New Zealand vs Australia: ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 6 ವಿಕೆಟ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ 25 ರನ್ ಬಾರಿಸಿದ್ದ ಗ್ಲೆನ್ ಮ್ಯಾಕ್ಸ್ವೆಲ್ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಆರೋನ್ ಫಿಂಚ್ ಹೆಸರಿನಲ್ಲಿದ್ದ ಸಿಕ್ಸರ್ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.