ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಸಿಡಿಸಿ ಗ್ಲೆನ್ ಮ್ಯಾಕ್ಸ್ವೆಲ್ ವಿಶ್ವಕಪ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಕ್ಸ್ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್ - ಫೋರ್ಗಳ ಸುರಿಮಳೆಗೈದ ಮ್ಯಾಕ್ಸಿ 8 ಭರ್ಜರಿ ಸಿಕ್ಸರ್ ಹಾಗೂ 9 ಫೋರ್ಗಳೊಂದಿಗೆ ಕೇವಲ 40 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು.
ಇದರೊಂದಿಗೆ ಏಕದಿನ ವಿಶ್ವಕಪ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಶ್ವ ದಾಖಲೆ ಗ್ಲೆನ್ ಮ್ಯಾಕ್ಸ್ವೆಲ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾ ಐಡೆನ್ ಮಾರ್ಕ್ರಾಮ್ ಹೆಸರಿನಲ್ಲಿತ್ತು.
ಈ ಬಾರಿಯ ವಿಶ್ವಕಪ್ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೇವಲ 49 ಎಸೆತಗಳಲ್ಲಿ ಶತಕ ಸಿಡಿಸಿ ಐಡೆನ್ ಮಾರ್ಕ್ರಾಮ್ ಹೊಸ ವಿಶ್ವ ದಾಖಲೆ ಬರೆದಿದ್ದರು.
ಇದೀಗ ಕೇವಲ 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಗ್ಲೆನ್ ಮ್ಯಾಕ್ಸ್ವೆಲ್ ಮಾರ್ಕ್ರಾಮ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್ನಲ್ಲಿ ಅತೀ ವೇಗದ ಶತಕ ಸಿಡಿಸಿ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಒಟ್ಟು 44 ಎಸೆತಗಳನ್ನು ಎದುರಿಸಿದ ಗ್ಲೆನ್ ಮ್ಯಾಕ್ಸ್ವೆಲ್ 106 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
Published On - 6:07 pm, Wed, 25 October 23