AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೈದರಾಬಾದ್’ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಡೈರೆಕ್ಟ್ ಎಂಟ್ರಿ

Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ 13 ಸೀಸನ್​ ಆಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಇದೀಗ ಪಾಕಿಸ್ತಾನದ ಹೈದರಾಬಾದ್ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 21, 2026 | 8:24 AM

Share
ಆಸ್ಟ್ರೇಲಿಯಾದ ಸ್ಟಾರ್ ಆಲ್-ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ಗೆ​ (PSL 2026) ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ನೇರ ಆಯ್ಕೆಯ ಮೂಲಕ. ಅಂದರೆ ಈ ಬಾರಿಯ ಪಿಎಸ್​ಎಲ್​ ಹರಾಜಿನಲ್ಲಿ ಮ್ಯಾಕ್ಸ್​ವೆಲ್ ಹೆಸರು ಕಾಣಿಸಿಕೊಂಡಿರಲಿಲ್ಲ. ಇದೀಗ ನೇರ ಸೈನಿಂಗ್ ಮೂಲಕ ಮ್ಯಾಕ್ಸಿ  ಹೈದರಾಬಾದ್ ಕಿಂಗ್ಸ್‌ಮೆನ್ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ.

1 / 5
ಇದಕ್ಕೂ ಮುನ್ನ ಮ್ಯಾಕ್ಸ್​ವೆಲ್ ಪೇಶಾವರ್ ಝಲ್ಮಿ ತಂಡದ ಪರ ಆಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು. ಆದರೆ ಕಾರಣಾಂತರಗಳಿಂದ ಝಲ್ಮಿ ಹಾಗೂ ಮ್ಯಾಕ್ಸಿ ನಡುವೆ ಡೀಲ್ ಕುದುರಿರಲಿಲ್ಲ. ಇದೀಗ ಪಿಎಸ್​ಎಲ್​ನ ಹೊಸ ಫ್ರಾಂಚೈಸಿ ಹೈದರಾಬಾದ್ ಕಿಂಗ್ಸ್​ಮೆನ್ ಪರ ಕಣಕ್ಕಿಳಿಯಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

2 / 5
ಇನ್ನು ಹೈದರಾಬಾದ್ ಕಿಂಗ್ಸ್​ಮೆನ್ ಫ್ರಾಂಚೈಸಿಯು ಗ್ಲೆನ್​ ಮ್ಯಾಕ್ಸ್​ವೆಲ್ ಜೊತೆ  ಸುಮಾರು 4.5 ಕೋಟಿ ಪಾಕಿಸ್ತಾನಿ ರೂಪಾಯಿಗಳಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ 1.47 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ.

3 / 5
ಈ ಮೊತ್ತವು ಗ್ಲೆನ್ ಮ್ಯಾಕ್ಸ್​ವೆಲ್ ಈ ಹಿಂದೆ ಐಪಿಎಲ್​ನಲ್ಲಿ ಪಡೆದಿದ್ದ ಸಂಭಾವನೆಗಿಂತ ಕಡಿಮೆ ಎಂಬುದು ವಿಶೇಷ. ಏಕೆಂದರೆ ಕಳೆದ ಸೀಸನ್​ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯಿಂದ ಪಡೆದ ಮೊತ್ತ 4.20 ಕೋಟಿ ರೂ. 

4 / 5
ಐಪಿಎಲ್​ನಲ್ಲಿ ಸಿಕ್ಕ  ಮೊತ್ತಕ್ಕೆ ಹೋಲಿಸಿದರೆ ಪಿಎಸ್​ಎಲ್​ನಲ್ಲಿ ಮ್ಯಾಕ್ಸ್​ವೆಲ್​ಗೆ ಸಿಗುತ್ತಿರುವುದು ಕಡಿಮೆ ಸಂಭಾವನೆ. ಇದಾಗ್ಯೂ ಅವರು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ 11ನೇ ಆವೃತ್ತಿಯ ಪಿಎಸ್​ಎಲ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಹೈದರಾಬಾದ್ ಕಿಂಗ್ಸ್​ಮೆನ್ ಪರ ಕಣಕ್ಕಿಳಿಯಲಿದ್ದಾರೆ.

5 / 5
Follow Us
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ

ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು

‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ

ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?

Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ

ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ