6505 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

Australia vs Pakistan: ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ. ಈ ಪಂದ್ಯದ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 17, 2024 | 9:25 AM

ಪಾಕಿಸ್ತಾನ್ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಲ್ಲಿ 64 ರನ್ ಕಲೆಹಾಕುವ ಮೂಲಕ ಆಸ್ಟ್ರೇಲಿಯಾದ ಸ್ಪೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಕೀರನ್ ಪೊಲಾರ್ಡ್ ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಪಾಕ್ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ ಕ್ರಮವಾಗಿ 43 ಹಾಗೂ 21 ರನ್​ ಕಲೆಹಾಕಿದ್ದಾರೆ. ಈ ರನ್​ಗಳೊಂದಿಗೆ ಮ್ಯಾಕ್ಸಿ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಕಡಿಮೆ ಎಸೆತಗಳಲ್ಲಿ 10000 ರನ್​ ಪೂರೈಸಿದ ವಿಶ್ವ ದಾಖಲೆ ಮ್ಯಾಕ್ಸ್​ವೆಲ್ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಹೆಸರಿನಲ್ಲಿತ್ತು. ಪೊಲಾರ್ಡ್​ 6640 ಎಸೆತಗಳಲ್ಲಿ 10 ಸಾವಿರ ರನ್ ಪೂರೈಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮ್ಯಾಕ್ಸ್​ವೆಲ್ ಮುರಿದಿದ್ದಾರೆ.

3 / 5
ಗ್ಲೆನ್ ಮ್ಯಾಕ್ಸ್​ವೆಲ್ ಕೇವಲ 6505 ಎಸೆತಗಳಲ್ಲಿ 10 ಸಾವಿರ ರನ್ ಕಲೆಹಾಕಿದ್ದು, ಈ ಮೂಲಕ ಟಿ20 ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಹತ್ತು ಸಾವಿರ ರನ್​ಗಳ ಮೈಲುಗಲ್ಲು ದಾಟಿದ ವಿಶ್ವ ದಾಖಲೆಯನ್ನು ಮ್ಯಾಕ್ಸ್​ವೆಲ್ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್ ಪೂರೈಸಿದ ವಿಶ್ವದ 16ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 14562 ರನ್ ಕಲೆಹಾಕಿರುವ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 10031 ರನ್​ಗಳೊಂದಿಗೆ ಮ್ಯಾಕ್ಸ್​ವೆಲ್ ಹದಿನಾರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 5
Follow us
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ

ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?

ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್

ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು

ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ

ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?

‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ