Glenn Maxwell: ಆಸ್ಟ್ರೇಲಿಯಾ ತಂಡದಿಂದ ಗ್ಲೆನ್ ಮ್ಯಾಕ್ಸ್‌ವೆಲ್ ಔಟ್! ಕಾರಣವೇನು ಗೊತ್ತಾ?
Glenn Maxwell: ವಿಶ್ವಕಪ್ ಸಮೀಪಿಸುತ್ತಿರುವಾಗಲೇ ಹಾಲಿ ಟಿ20 ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಎಡ ಪಾದದ ಗಾಯದಿಂದ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.
1 / 8
ವಿಶ್ವಕಪ್ ಸಮೀಪಿಸುತ್ತಿರುವಾಗಲೇ ಹಾಲಿ ಟಿ20 ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಎಡ ಪಾದದ ಗಾಯದಿಂದ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.
2 / 8
ಮ್ಯಾಕ್ಸ್‌ವೆಲ್ ಕಳೆದ ವರ್ಷ ಕಾಲು ಮುರಿತಕ್ಕೆ ಒಳಗಾಗಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಬಹಳ ದಿನಗಳಿಂದ ಹೊರಗುಳಿದಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಆಫ್ರಿಕಾ ಪ್ರವಾಸದಲ್ಲಿ ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿತ್ತು.
3 / 8
ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ 34 ವರ್ಷದ ಮ್ಯಾಕ್ಸ್‌ವೆಲ್ ದಕ್ಷಿಣ ಆಫ್ರಿಕಾ ಪ್ರವಾಸದ ಏಕದಿನ ಸರಣಿಯಿಂದ ಹಿಂದೆ ಸರಿದ್ದಿದ್ದರು. ಆದರೆ ಇದೀಗ ಮ್ಯಾಕ್ಸ್‌ವೆಲ್ ಟಿ20 ಸರಣಿಯಿಂದಲೂ ಹೊರಬಿದ್ದಿದ್ದಾರೆ.
4 / 8
ಇದೀಗ ಮ್ಯಾಕ್ಸ್‌ವೆಲ್ ತಂಡದಿಂದ ಹೊರಗುಳಿದಿರುವುದರಿಂದಾಗಿ ವಿಕೆಟ್‌ಕೀಪರ್-ಬ್ಯಾಟರ್ ಮ್ಯಾಥ್ಯೂ ವೇಡ್‌ಗೆ ಆಸೀಸ್ ತಂಡದಲ್ಲಿ ಅವಕಾಶ ನೀಡಲಾಗಿದೆ. ಕೊನೆಯ ಬಾರಿಗೆ ಟಿ20 ವಿಶ್ವಕಪ್ 2022 ರಲ್ಲಿ ಆಸೀಸ್ ಪರ ಕಣಕ್ಕಿಳಿದಿದ್ದ ವೇಡ್, ಆ ಬಳಿಕ ಆಸೀಸ್ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ.
5 / 8
ವಾಸ್ತವವಾಗಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿರುವ ಏಕೈಕ ಆಟಗಾರ ಮ್ಯಾಕ್ಸ್‌ವೆಲ್ ಅಲ್ಲ. ಮ್ಯಾಕ್ಸ್ವೆಲ್ಗೂ ಮೊದಲು ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಕ್ಯಾಮರೂನ್ ಗ್ರೀನ್ ಮತ್ತು ಡೇವಿಡ್ ವಾರ್ನರ್ ಸೇರಿದಂತೆ ಇತರ ಸ್ಟಾರ್ ಆಟಗಾರರು ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದಾರೆ.
6 / 8
ಕಳೆದ ವರ್ಷ ಗೆಳೆಯನ ಜನ್ಮದಿನದ ಪಾರ್ಟಿಯಲ್ಲಿ ಮ್ಯಾಕ್ಸ್‌ವೆಲ್ ಕಾಲು ಮುರಿದುಕೊಂಡಿದ್ದರು. ಹೀಗಾಗಿ ಅವರ ಎಡಗಾಲಿಗೆ ಲೋಹದ ಫಲಕವನ್ನು ಹಾಕಲಾಗಿತ್ತು. ಇತ್ತೀಚಿನ ತರಬೇತಿ ಸೆಷನ್ನಲ್ಲಿ ಮ್ಯಾಕ್ಸ್ವೆಲ್ಗೆ ನೋವು ಕಾಣಿಸಿಕೊಂಡಿದ್ದರಿಂದ ಮ್ಯಾಕ್ಸ್ವೆಲ್ರನ್ನು ತಂಡದಿಂದ ಕೈಬಿಡಲಾಗಿದೆ.
7 / 8
ಈ ಬಗ್ಗೆ ಆಸೀಸ್ ತಂಡದ ಸದಸ್ಯರಾ ಟೋನಿ ಡೋಡೆಮೈಡ್ ಅವರು ಮ್ಯಾಕ್ಸ್‌ವೆಲ್ ಗಾಯದ ಬಗ್ಗೆ ಮಾಹಿತಿ ನೀಡಿದ್ದು, ವಿಶ್ವಕಪ್‌ಗೆ ಮುಂಚಿತವಾಗಿ ಭಾರತದಲ್ಲಿ ನಡೆಯಲ್ಲಿರುವ ಮೂರು ಪಂದ್ಯಗಳ ಏಕದಿನ ಸರಣಿ ವೇಳೆಗೆ ಮ್ಯಾಕ್ಸ್‌ವೆಲ್ ಲಭ್ಯವಾಗುವಂತೆ ನಾವು ಅವರ ಚೇತರಿಕೆಯ ಮೇಲೆ ನಿಗಾ ಇಡುತ್ತೇವೆ ಎಂದು ಹೇಳಿದ್ದಾರೆ.
8 / 8
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಜೇಸನ್ ಬೆಹ್ರೆಂಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆಶ್ಟನ್ ಟರ್ನರ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.