IPL 2022: ಐಪಿಎಲ್ ಡೇಟ್ ಫಿಕ್ಸ್ ಬೆನ್ನಲ್ಲೇ RCB ತಂಡಕ್ಕೆ ಬಿಗ್ ಶಾಕ್
IPL 2022 RCB Full Squad: ಆರ್ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್.
Updated on: Feb 26, 2022 | 5:43 PM

ಐಪಿಎಲ್ ಸೀಸನ್ 15 ಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮಾರ್ಚ್ 26 ರಿಂದ ರಂಗು ರಂಗಿನ ಕ್ರಿಕೆಟ್ ಟೂರ್ನಿಗೆ ಚಾಲನೆ ದೊರೆಯಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 29 ರಂದು ನಡೆಯಲಿದೆ. ಆದರೆ ಇತ್ತ ಐಪಿಎಲ್ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅತ್ತ ಆರ್ಸಿಬಿಗೆ ಹೊಸ ಚಿಂತೆ ಶುರುವಾಗಿದೆ.

ಏಕೆಂದರೆ ಆರ್ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಮದುವೆ ಕೂಡ ಫಿಕ್ಸ್ ಆಗಿದ್ದು, ಮಾರ್ಚ್ 27 ರಂದು ಭಾರತೀಯ ಮೂಲದ ವಿನಿ ರಾಮನ್ ಜೊತೆ ಹಸೆಮಣೆ ಏರಲಿದ್ದಾರೆ.

ಆದರೆ ಐಪಿಎಲ್ನಲ್ಲಿ ಭಾಗವಹಿಸಲಿರುವ ಆಟಗಾರರು 5 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಅದರಂತೆ ಮ್ಯಾಕ್ಸ್‌ವೆಲ್ ಐಪಿಎಲ್ನ ಆರಂಭಿಕ ಪಂದ್ಯಗಳಲ್ಲಿ ಪಾಲ್ಗೊಳ್ಳಬೇಕಿದ್ರೆ ಮಾರ್ಚ್ 20 ರೊಳಗೆ ಕ್ವಾರಂಟೈನ್ಗೆ ಒಳಗಾಗಬೇಕಾಗುತ್ತದೆ. ಆದರೆ ಅತ್ತ ಮಾರ್ಚ್ 27 ಕ್ಕೆ ಮದುವೆ ಫಿಕ್ಸ್ ಆಗಿರುವ ಕಾರಣ ಮ್ಯಾಕ್ಸಿ ಐಪಿಎಲ್ನತ್ತ ಮುಖ ಮಾಡುವುದು ಡೌಟ್.

ಇನ್ನು ಮದುವೆ ಸಂಭ್ರಮ ಮುಗಿಸಿ ಐಪಿಎಲ್ಗೆ ಆಗಮಿಸಿದರೂ 5 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದೆ. ಹೀಗಾಗಿ ವಿವಾಹದ ಬಳಿಕ ಮಾರ್ಚ್ 30 ಕ್ಕೆ ಆಗಮಿಸಿದರೂ, ಮ್ಯಾಕ್ಸ್‌ವೆಲ್ ಏಪ್ರಿಲ್ 6 ರ ಬಳಿಕವಷ್ಟೇ ತಂಡವನ್ನು ಕೂಡಿಕೊಳ್ಳಬಹುದು. ಹೀಗಾಗಿ ಮ್ಯಾಕ್ಸ್‌ವೆಲ್ ಆರ್ಸಿಬಿ ತಂಡದ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಒಟ್ಟಿನಲ್ಲಿ ಆರಂಭಿಕ ಪಂದ್ಯಗಳಿಂದಲೇ ತಂಡದ ಸ್ಟಾರ್ ಆಟಗಾರ ಹೊರಗುಳಿಯುತ್ತಿರುವುದು ಆರ್ಸಿಬಿ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆಯಾ ಕಾದು ನೋಡಬೇಕಿದೆ.

ಆರ್ಸಿಬಿ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್ ಗೌತಮ್, ಕರಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.
