- Kannada News Photo gallery Cricket photos Glenn Maxwell steps down as Captain From Melbourne Stars in BBL
Glenn Maxwell: ಏಕಾಏಕಿ ನಾಯಕತ್ವದಿಂದ ಕೆಳಗಿಳಿದ ಗ್ಲೆನ್ ಮ್ಯಾಕ್ಸ್‌ವೆಲ್..!
Glenn Maxwell: ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಈ ಆವೃತ್ತಿಯ ಬಿಗ್ ಬ್ಯಾಷ್ ಟಿ20 ಲೀಗ್ ಇದೀಗ ಅಂತಿಮ ಹಂತವನ್ನು ತಲುಪಿದೆ. ಏತನ್ಮಧ್ಯೆ, ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕರಾಗಿದ್ದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ತಂಡದ ಅವಮಾನಕರ ಪ್ರದರ್ಶನದ ನಂತರ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.
Updated on: Jan 19, 2024 | 3:26 PM

ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಈ ಆವೃತ್ತಿಯ ಬಿಗ್ ಬ್ಯಾಷ್ ಟಿ20 ಲೀಗ್ ಇದೀಗ ಅಂತಿಮ ಹಂತವನ್ನು ತಲುಪಿದೆ. ಏತನ್ಮಧ್ಯೆ, ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕರಾಗಿದ್ದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ತಂಡದ ಅವಮಾನಕರ ಪ್ರದರ್ಶನದ ನಂತರ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.

2018ರಲ್ಲಿ ಈ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಮ್ಯಾಕ್ಸ್‌ವೆಲ್ ತಂಡದ ಕಳಪೆ ಪ್ರದರ್ಶನದ ಹೊಣೆ ಹೊತ್ತು ನಾಯಕತ್ವದಿಂದ ಕೆಳಗಿಳಿಯಲು ಮುಂದಾಗಿದ್ದಾರೆ. ಈ ಸೀಸನ್ನ ಲೀಗ್ ಹಂತದಲ್ಲಿ ಮ್ಯಾಕ್ಸ್‌ವೆಲ್ ತಂಡವು ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನವನ್ನು ಗಳಿಸಿದ್ದು, ಇದು ತಂಡದ ನಿರಸ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ.

ಈ ಆವೃತ್ತಿಯ ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ಪಯಣವನ್ನು ನಾವು ನೋಡಿದರೆ, ಆಡಿರುವ 10 ಪಂದ್ಯಗಳ ಪೈಕಿ ಈ ತಂಡ 6 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದರೆ, ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

Cricket.com AU ನ ವರದಿಯ ಪ್ರಕಾರ, ಗ್ಲೆನ್ ಮ್ಯಾಕ್ಸ್‌ವೆಲ್ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ತಮ್ಮ ತಂಡದ ಆಟಗಾರರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಮ್ಯಾಕ್ಸ್‌ವೆಲ್ ಮುಂದಿನ ಸೀಸನ್ನಿಂದ ತಂಡದಲ್ಲಿ ಕೇವಲ ಆಟಗಾರನಾಗಿ ಆಡಲಿದ್ದಾರೆ ಎಂದು ವರದಿಯಾಗಿದೆ.

ಹೋಬರ್ಟ್ ಹರಿಕೇನ್ಸ್ ತಂಡದ ವಿರುದ್ಧ 7 ರನ್ ಅಂತರದ ಸೋಲಿನ ನಂತರ ಮ್ಯಾಕ್ಸ್‌ವೆಲ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ಸೀಸನ್ನಲ್ಲಿ ತಂಡವು ಸತತ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ ಪ್ಲೇಆಫ್ ರೇಸ್ ಅನ್ನು ಜೀವಂತವಾಗಿರಿಸಿಕೊಂಡಿತ್ತು. ಆದರೆ ಲೀಗ್ ಹಂತದ ಕೊನೆಯ 3 ಪಂದ್ಯಗಳನ್ನು ಸೋಲುವ ಮೂಲಕ ತಂಡವು ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿದೆ.

ಈ ಆವೃತ್ತಿಯ ಬಿಗ್ ಬ್ಯಾಷ್ ಲೀಗ್ನ, ಲೀಗ್ ಹಂತದ ಪಂದ್ಯಗಳು ಮುಗಿದ ನಂತರ, ಪ್ಲೇಆಫ್ ಪಂದ್ಯಗಳು ಜನವರಿ 19 ರಿಂದ ಪ್ರಾರಂಭವಾಗುತ್ತವೆ. ಈ ಬಾರಿ ಬ್ರಿಸ್ಬೇನ್ ಹೀಟ್, ಸಿಡ್ನಿ ಸಿಕ್ಸರ್ಸ್, ಪರ್ತ್ ಸ್ಕಾರ್ಚರ್ಸ್ ಮತ್ತು ಅಡಿಲೇಡ್ ಸ್ಟ್ರೈಕರ್ಸ್ ತಂಡಗಳು ಮುಂದಿನ ಹಂತಕ್ಕೆ ಆಯ್ಕೆಯಾಗಿವೆ.

ಇದರಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಬ್ರಿಸ್ಬೇನ್ ಹೀಟ್ ಮತ್ತು ಸಿಡ್ನಿ ಸಿಕ್ಸರ್ಸ್ ನಡುವೆ ನಡೆದರೆ, ನಾಕೌಟ್ ಪಂದ್ಯ ಪರ್ತ್ ಸ್ಕಾರ್ಚರ್ಸ್ ಮತ್ತು ಅಡಿಲೇಡ್ ಸ್ಟ್ರೈಕರ್ಸ್ ನಡುವೆ ನಡೆಯಲಿದೆ. ಈ ಋತುವಿನ ಪ್ರಶಸ್ತಿ ಪಂದ್ಯ ಜನವರಿ 24 ರಂದು ನಡೆಯಲಿದೆ.




