Glenn Maxwell: ಅಜೇಯ… ಹೀಗೊಂದು ವಿಶ್ವ ದಾಖಲೆ ಬರೆದ ಮ್ಯಾಕ್ಸ್ವೆಲ್
TV9 Web | Updated By: ಝಾಹಿರ್ ಯೂಸುಫ್
Updated on:
Feb 12, 2024 | 3:03 PM
Glenn Maxwell: ಅಡಿಲೇಡ್ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 55 ಎಸೆತಗಳನ್ನು ಎದುರಿಸಿದ ಗ್ಲೆನ್ ಮ್ಯಾಕ್ಸ್ವೆಲ್ 8 ಭರ್ಜರಿ ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ ಅಜೇಯ 120 ರನ್ ಬಾರಿಸಿದ್ದರು. ಈ ಭರ್ಜರಿ ಸೆಂಚುರಿಯೊಂದಿಗೆ ಮ್ಯಾಕ್ಸ್ವೆಲ್ ಟಿ20 ಕ್ರಿಕೆಟ್ನಲ್ಲಿ ಇದುವರೆಗೆ ಯಾರೂ ಮಾಡದ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.
1 / 7
ಅಡಿಲೇಡ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell) ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳಲ್ಲಿ ಒಂದು ಅಜೇಯ ವಿಶ್ವ ದಾಖಲೆ ಕೂಡ ಸೇರಿದೆ.
2 / 7
ಅಂದರೆ ಟಿ20 ಕ್ರಿಕೆಟ್ನಲ್ಲಿ ಶತಕ ಸಿಡಿಸಿ ಅತ್ಯಧಿಕ ಬಾರಿ ಅಜೇಯರಾಗಿ ಉಳಿದ ವಿಶ್ವ ದಾಖಲೆ ಗ್ಲೆನ್ ಮ್ಯಾಕ್ಸ್ವೆಲ್ ಹೆಸರಿಗೆ ಸೇರ್ಪಡೆಯಾಗಿದೆ. ಟಿ20 ಕ್ರಿಕೆಟ್ನಲ್ಲಿ ಇದುವರೆಗೆ ಐದು ಶತಕಗಳನ್ನು ಬಾರಿಸಿರುವ ಮ್ಯಾಕ್ಸ್ವೆಲ್ ಒಮ್ಮೆಯೂ ಔಟ್ ಆಗಿಲ್ಲ ಎಂಬುದು ವಿಶೇಷ.
3 / 7
2016 ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಅಜೇಯ 145 ರನ್ ಬಾರಿಸಿದ್ದರು. ಇದಾದ ಬಳಿಕ 2018 ರಲ್ಲಿ ಇಂಗ್ಲೆಂಡ್ ವಿರುದ್ಧ 103 ರನ್ ಸಿಡಿಸಿ ಅಜೇಯರಾಗುಳಿದರು. ಇನ್ನು 2019 ರಲ್ಲಿ ಟೀಮ್ ಇಂಡಿಯಾ ವಿರುದ್ಧ 113 ರನ್ ಬಾರಿಸಿ ನಾಟೌಟ್ ಆಗಿದ್ದರು. ಹಾಗೆಯೇ 2023 ರಲ್ಲಿ ಭಾರತದ ವಿರುದ್ಧ 104 ರನ್ಗಳ ಅಜೇಯ ಶತಕ ಸಿಡಿಸಿದ್ದರು. ಇದೀಗ ವೆಸ್ಟ್ ಇಂಡೀಸ್ ವಿರುದ್ಧ 120 ರನ್ ಬಾರಿಸಿ ಅಜೇಯರಾಗುಳಿದಿದ್ದಾರೆ.
4 / 7
ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಅಜೇಯ ಶತಕಗಳನ್ನು ಬಾರಿಸಿದ ವಿಶೇಷ ವಿಶ್ವ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್ವೆಲ್ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಅಜೇಯ ಶತಕಗಳನ್ನು ಬಾರಿಸಿದ ಬ್ಯಾಟರ್ಗಳ ದಾಖಲೆ ಈ ಕೆಳಗಿನಂತಿದೆ...
5 / 7
ಟೆಸ್ಟ್ ಕ್ರಿಕೆಟ್: ವೆಸ್ಟ್ ಇಂಡೀಸ್ ತಂಡದ ಮಾಜಿ ಆಟಗಾರ ಶಿವನರೈನ್ ಚಂದ್ರಪಾಲ್ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಅಜೇಯ ಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ. 164 ಟೆಸ್ಟ್ ಪಂದ್ಯಗಳನ್ನಾಡಿರುವ ಚಂದ್ರಪಾಲ್ 18 ಅಜೇಯ ಶತಕ ಸಿಡಿಸಿದ್ದರು.
6 / 7
ಏಕದಿನ ಕ್ರಿಕೆಟ್: 50 ಓವರ್ಗಳ ಪಂದ್ಯಗಳಲ್ಲಿ ಅತೀ ಹೆಚ್ಚು ಅಜೇಯ ಶತಕ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 292 ಏಕದಿನ ಪಂದ್ಯಗಳನ್ನಾಡಿರುವ ಕಿಂಗ್ ಕೊಹ್ಲಿ 19 ಅಜೇಯ ಶತಕ ಬಾರಿಸಿದ್ದಾರೆ.
7 / 7
ಟಿ20 ಕ್ರಿಕೆಟ್: ಚುಟುಕು ಕ್ರಿಕೆಟ್ನಲ್ಲಿ 102 ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್ವೆಲ್ 5 ಅಜೇಯ ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಯಾರೂ ಮಾಡದ ವಿಶೇಷ ವಿಶ್ವ ದಾಖಲೆಯನ್ನು ಮ್ಯಾಕ್ಸ್ವೆಲ್ ಬರೆದಿದ್ದಾರೆ.