AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಬೌಲರ್​ಗಳನ್ನ ಚೆಂಡಾಡಿ ಇತಿಹಾಸವನ್ನೇ ಬದಲಿಸಿದ ಗ್ಲೆನ್ ಫಿಲಿಪ್ಸ್!

ಭಾರತದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಆಕ್ಲೆಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 20 ಓವರ್​ಗಳಲ್ಲಿ 259 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 172 ರನ್​ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ನ್ಯೂಝಿಲೆಂಡ್ ತಂಡ 87 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಗ್ಲೆನ್ ಫಿಲಿಪ್ಸ್.

ಝಾಹಿರ್ ಯೂಸುಫ್
|

Updated on: Oct 31, 2026 | 8:08 AM

Share
ಟೀಮ್ ಇಂಡಿಯಾ ವಿರುದ್ಧ ನ್ಯೂಝಿಲೆಂಡ್ ದಾಂಡಿಗ ಗ್ಲೆನ್ ಫಿಲಿಪ್ಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದೂ ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಗ್ಲೆನ್ ಫಿಲಿಪ್ಸ್ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಬರೆದಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. (PC: Gettyimages)

1 / 6
ಆಕ್ಲೆಂಡ್​ನ ಈಡನ್ ಪಾರ್ಕ್‌ನಲ್ಲಿ ನಡೆದ ಭಾರತದ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಫಿಲಿಪ್ಸ್ ಕೇವಲ 49 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 6 ಫೋರ್​ಗಳೊಂದಿಗೆ 107 ರನ್ ಚಚ್ಚಿದ್ದರು. ಈ 107 ರನ್​ಗಳೊಂದಿಗೆ ಭಾರತದ ವಿರುದ್ಧ ದ್ವಿಪಕ್ಷೀಯ ಸರಣಿಯಲ್ಲಿ ಫಿಲಿಪ್ಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: Gettyimages)

2 / 6
ಅಂದರೆ ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ಭರ್ಜರಿ ದಾಖಲೆಯೊಂದು ಗ್ಲೆನ್ ಫಿಲಿಪ್ಸ್ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಹೆಸರಿನಲ್ಲಿತ್ತು. (PC: Gettyimages)

3 / 6
2026 ರಲ್ಲಿ ನಡೆದ ಭಾರತದ ವಿರುದ್ಧ ಟಿ20 ಸರಣಿಯಲ್ಲಿ ಶಾಯ್ ಹೋಪ್ 4 ಇನಿಂಗ್ಸ್​ಗಳ ಮೂಲಕ ಬರೋಬ್ಬರಿ 261 ರನ್ ಚಚ್ಚಿದ್ದರು. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಟಿ20 ಸರಣಿಯೊಂದರಲ್ಲಿ ಗರಿಷ್ಠ ರನ್ ಪೇರಿಸಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದರು. (PC: Gettyimages)

4 / 6
ಇದೀಗ ಈ ದಾಖಲೆಯನ್ನು ಗ್ಲೆನ್ ಫಿಲಿಪ್ಸ್ ಅಳಿಸಿ ಹಾಕಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಸರಣಿಯ ಮೊದಲ 4 ಪಂದ್ಯಗಳ ಮೂಲಕ ಫಿಲಿಪ್ಸ್ ಬರೋಬ್ಬರಿ  276 ರನ್ (ಎರಡು ಅರ್ಧಶತಕ, ಒಂದು ಶತಕ) ಕಲೆಹಾಕಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಟಿ20 ಸರಣಿಯೊಂದರಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)

5 / 6
ಈ ದಾಖಲೆಯ ಜೊತೆಗೆ ನ್ಯೂಝಿಲೆಂಡ್ ಪರ ಅತಿ ಹೆಚ್ಚು ಟಿ20 ಶತಕ ಸಿಡಿಸಿದ ಕಾಲಿನ್ ಮನ್ರೊ ಮತ್ತು ಫಿನ್ ಅಲೆನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದರೊಂದಿಗೆ ನಾಲ್ಕನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಕಣಕ್ಕಿಳಿದು ಅತಿ ಹೆಚ್ಚು ಟಿ20 ಶತಕ ಬಾರಿಸಿದ ಭಾರತದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ (3 ಶತಕ) ಅವರ ದಾಖಲೆಯನ್ನು ಕೂಡ ಗ್ಲೆನ್ ಫಿಲಿಪ್ಸ್ ಸಮಗಟ್ಟಿದ್ದಾರೆ. ಹಾಗೆಯೇ ಕಾಲಿನ್ ಮನ್ರೋ (2017) ಬಳಿಕ ಟೀಮ್ ಇಂಡಿಯಾ ವಿರುದ್ಧ ಟಿ20 ಸೆಂಚುರಿ ಸಿಡಿಸಿದ ನ್ಯೂಝಿಲೆಂಡ್‌ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. (PC: Gettyimages)

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ

ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ

ನಿಯಮ ಉಲ್ಲಂಘಿಸಿದ್ದ ಎಂಟು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಬಂದ್

ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!

ನಿರಾಣಿ ಫ್ಯಾಕ್ಟರಿಯಿಂದ ಸಕ್ಕರೆ ಸಾಗಿಸುತ್ತಿದ್ದ ಲಾರಿಗಳನ್ನ ತಡೆದ ರೈತರು

ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು

ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ

ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು

ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?