ಪಾಕ್ ವಿರುದ್ಧ ಅಬ್ಬರಿಸಿ ಆರ್​ಸಿಬಿ ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿದ ಗ್ಲೆನ್ ಮ್ಯಾಕ್ಸ್​ವೆಲ್

Australia vs Pakistan: ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 29 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಗ್ಲೆನ್ ಮ್ಯಾಕ್ಸ್‌ವೆಲ್ 19 ಎಸೆತಗಳಲ್ಲಿ 43 ರನ್ ಗಳಿಸಿ ಅದ್ಭುತ ಪ್ರದರ್ಶನ ನೀಡಿದರು ಮತ್ತು ಟಿ20 ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲಿಗಲ್ಲನ್ನು ತಲುಪಿದರು.

ಪೃಥ್ವಿಶಂಕರ
|

Updated on: Nov 14, 2024 | 5:49 PM

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ 3 ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಗಬ್ಬಾದಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ 29 ರನ್​ಗಳಿಂದ ಗೆದ್ದುಕೊಂಡಿದೆ. ಮಳೆಯಿಂದಾಗಿ ಸರಣಿಯ ಮೊದಲ ಪಂದ್ಯ ಮೂರು ಗಂಟೆಗಳ ವಿಳಂಬದೊಂದಿಗೆ ಪ್ರಾರಂಭವಾಯಿತು. ಹೀಗಾಗಿ ಓವರ್‌ಗಳನ್ನು ಕಡಿತಗೊಳಿಸಿ ತಲಾ 7 ಓವರ್‌ಗಳ ಪಂದ್ಯವನ್ನು ನಡೆಸಲಾಯಿತು.

1 / 9
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್​ವೆಲ್ ಆಸ್ಟ್ರೇಲಿಯಾ ಸ್ಫೋಟಕ ಇನ್ನಿಂಗ್ಸ್ ಆಡಿದರು. 226.31 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಮ್ಯಾಕ್ಸ್‌ವೆಲ್ ಕೇವಲ 19 ಎಸೆತಗಳಲ್ಲಿ 43 ರನ್ ಗಳಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು.

2 / 9
ಇನ್ನು ಈ ಪಂದ್ಯದಲ್ಲಿ 12 ರನ್ ಗಳಿಸುವ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಟಿ20 ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದರು. ಇದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ 16ನೇ ಆಟಗಾರ ಎನಿಸಿಕೊಂಡಿದ್ದಾರೆ. 36 ವರ್ಷ ವಯಸ್ಸಿನ ಮ್ಯಾಕ್ಸ್‌ವೆಲ್ ಇದುವರೆಗೆ ಟಿ20 ಕ್ರಿಕೆಟ್‌ನಲ್ಲಿ 421 ಇನ್ನಿಂಗ್ಸ್‌ಗಳನ್ನಾಡಿದ್ದು, ಸುಮಾರು 28 ರ ಸರಾಸರಿಯಲ್ಲಿ 10031 ರನ್ ಗಳಿಸಿದ್ದಾರೆ. ಇದರಲ್ಲಿ ಏಳು ಶತಕ ಮತ್ತು 54 ಅರ್ಧ ಶತಕಗಳು ಸೇರಿವೆ.

3 / 9
ಹಾಗೆಯೇ ಗ್ಲೆನ್ ಮ್ಯಾಕ್ಸ್‌ವೆಲ್ ಟಿ20 ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ ಆಸ್ಟ್ರೇಲಿಯಾದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಮ್ಯಾಕ್ಸ್‌ವೆಲ್​ಗೂ ಮೊದಲು ಡೇವಿಡ್ ವಾರ್ನರ್ ಮತ್ತು ಆ್ಯರನ್ ಫಿಂಚ್ ಮಾತ್ರ ಈ ಸಾಧನೆ ಮಾಡಿದ್ದರು.

4 / 9
ವಾಸ್ತವವಾಗಿ ಟಿ20 ಸರಣಿಗೂ ಮುನ್ನ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಕೂಡ ನಡೆದಿತ್ತು. ಆದರೆ ಎಲ್ಲಾ ಮೂರು ಪಂದ್ಯಗಳಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ನಿರಸ ಪ್ರದರ್ಶನ ನೀಡಿದ್ದರು. ಅದರಲ್ಲೂ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಹ್ಯಾರಿಸ್ ರೌಫ್ ಔಟ್ ಮಾಡಿದ್ದರು.

5 / 9
ಆದರೆ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಥೆಯೇ ಬೇರೆಯಾಗಿತ್ತು. ಈ ಮಾದರಿಯಲ್ಲಿ ಹ್ಯಾರಿಸ್ ರೌಫ್ ಮೇಲೆ ಮುರಿದು ಬಿದ್ದ ಗ್ಲೆನ್ ಮ್ಯಾಕ್ಸ್‌ವೆಲ್, ರೌಫ್ ಅವರ ಒಂದೇ ಓವರ್‌ನಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದರು. ಹೀಗಾಗಿ ರೌಫ್ ಎಸೆದ 5 ಎಸೆತಗಳಲ್ಲಿ, ಮ್ಯಾಕ್ಸ್​ವೆಲ್ 17 ರನ್ ಕಲೆಹಾಕಿದರು.

6 / 9
ಇದೀಗ ಟಿ20 ಮಾದರಿಯಲ್ಲಿ ತಮ್ಮ ಹಳೆಯ ಫಾರ್ಮ್​ ಕಂಡುಕೊಂಡಿರುವ ಮ್ಯಾಕ್ಸ್​ವೆಲ್, ಆರ್​ಸಿಬಿ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ವಾಸ್ತವವಾಗಿ ಮ್ಯಾಕ್ಸ್​ವೆಲ್​ರನ್ನು ಆರ್​ಸಿಬಿ ರಿಟೈನ್ ಮಾಡಿಕೊಂಡಿಲ್ಲ. ಆದರೆ ಅವರನ್ನು ಹರಾಜಿನಲ್ಲಿ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು ಎನ್ನಲಾಗುತ್ತಿದೆ. ಇತ್ತ ಮ್ಯಾಕ್ಸ್​ವೆಲ್ ಕೂಡ ಮತ್ತೆ ಆರ್​ಸಿಬಿಯಲ್ಲಿ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

7 / 9
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಮ್ಯಾಕ್ಸ್‌ವೆಲ್ ಕೇವಲ 19 ಎಸೆತಗಳಲ್ಲಿ 43 ರನ್ ಗಳಿಸಿದರು. ಮ್ಯಾಕ್ಸ್‌ವೆಲ್ ಹೊರತುಪಡಿಸಿ ಮಾರ್ಕಸ್ ಸ್ಟೊಯಿನಿಸ್ ಕೂಡ 7 ಎಸೆತಗಳಲ್ಲಿ ಅಜೇಯ 21 ರನ್ ಗಳಿಸಿದರು. ಈ ಇಬ್ಬರ ಆಟದಿಂದಾಗಿ ಆಸ್ಟ್ರೇಲಿಯಾ 7 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿತು.

8 / 9
ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ, ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡ ಪರಿಣಾಮ, 7 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 64 ರನ್ ಗಳಿಸಲಷ್ಟೇ ಶಕ್ತವಾಗಿ 29 ರನ್​ಗಳಿಂದ ಸೋಲೊಪ್ಪಿಕೊಂಡಿತು. ಪಾಕ್ ಪರ ಅಬ್ಬಾಸ್ ಅಫ್ರಿದಿ ಮಾತ್ರ ಗರಿಷ್ಠ 20 ರನ್​ಗಳ ಇನ್ನಿಂಗ್ಸ್ ಆಡಿದರು.

9 / 9
Follow us
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್

ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು

ಮೊದಲ ಎಸೆತದಲ್ಲೇ ಸಿಕ್ಸರ್: ಸೂರ್ಯನ ದಾಖಲೆ ಸರಿಗಟ್ಟಿದ ರಮಣದೀಪ್

ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ: ಚಲುವರಾಯಸ್ವಾಮಿ

ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಅಂತ ನೆಹರೂ ಅರಿತಿದ್ದರು: ಡಿಕೆಶಿ

ಬಿಬಿಎಂಪಿ ಶಾಲಾಮಕ್ಕಳೊಂದಿಗೆ ಮಕ್ಕಳ ದಿನಾಚರಣೆ ಆಚರಿಸಿದ ಡಿಕೆ ಶಿವಕುಮಾರ್

ಜನರ ಭಾವನೆಗಳಿಗೆ ವಿರುದ್ಧವಾಗಿ ಸಿದ್ದರಾಮಯ್ಯ ಮಾತಾಡುತ್ತಾರೆ: ಸೋಮಣ್ಣ

"ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ": ಸ್ವಾಮೀಜಿ
ರೈತರಿಗೆ ನೀಡಿದ ನೋಟೀಸ್ ವಾಪಸ್ಸು ಪಡೆಯುವುದರಿಂದ ಏನೂ ಅಗಲ್ಲ: ಯತ್ನಾಳ್

ಸಚಿವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಮೇರೆಗೆ ಪುನೀತ್ ಪೊಲೀಸ್ ವಶಕ್ಕೆ