Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ್ದ ತ್ರಿಶಾಗೆ 1 ಕೋಟಿ ರೂ. ಬಹುಮಾನ..!

U19 Women's T20 World Cup 2025: ಮಲೇಷ್ಯಾದಲ್ಲಿ ನಡೆದಿದ್ದ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ತಂಡದ ಸ್ಟಾರ್ ಆಲ್‌ರೌಂಡರ್ ಗೊಂಗಡಿ ತ್ರಿಷಾ ಅವರ ಅದ್ಭುತ ಪ್ರದರ್ಶನಕ್ಕಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ 1 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ತ್ರಿಷಾ ಅವರು ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಲ್ಲದೆ ಶತಕವನ್ನೂ ಸಿಡಿಸಿದ್ದರು.

ಪೃಥ್ವಿಶಂಕರ
|

Updated on: Feb 05, 2025 | 7:09 PM

ಇತ್ತೀಚೆಗೆ ಮಲೇಷ್ಯಾದಲ್ಲಿ ನಡೆದಿದ್ದ ಎರಡನೇ ಆವೃತ್ತಿಯ ಅಂಡರ್-19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ಮಹಿಳಾ ತಂಡವು ಉತ್ತಮ ಪ್ರದರ್ಶನ ನೀಡಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಸತತ ಎರಡನೇ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿಯುವಲ್ಲಿ ಭಾರತ ತಂಡ ಯಶಸ್ವಿಯಾಗಿತ್ತು. ಇದಕ್ಕೂ ಮೊದಲು 2023 ರಲ್ಲಿ ನಡೆದಿದ್ದ ಮೊದಲ ಆವೃತ್ತಿಯಲ್ಲೂ ಭಾರತ ಚಾಂಪಿಯನ್ ಆಗಿತ್ತು.

1 / 6
ಭಾರತ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ಆಲ್‌ರೌಂಡರ್ ಗೊಂಗಡಿ ತ್ರಿಶಾ ಅವರಿಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ 1 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ತ್ರಿಶಾ ಅಲ್ಲದೆ ತಂಡದ ಭಾಗವಾಗಿದ್ದ ಧೃತಿ ಕೇಸರಿ ಅವರಿಗೆ 10 ಲಕ್ಷ ರೂ, ಹಾಗೂ ತಂಡದ ಮುಖ್ಯ ಕೋಚ್ ನೌಶೀನ್ ಅಲ್ ಖದೀರ್ ಮತ್ತು ತರಬೇತುದಾರೆ ಶಾಲಿನಿ ಅವರಿಗೂ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

2 / 6

ಈ ಐಸಿಸಿ ಟೂರ್ನಿಯಲ್ಲಿ ಭಾರತ ತಂಡದ ಆಲ್‌ರೌಂಡರ್ ಗೊಂಗಡಿ ತ್ರಿಶಾ ಅಮೋಘ ಪ್ರದರ್ಶನ ನೀಡಿದ್ದರು. ಬಹುತೇಕ ಎಲ್ಲಾ ಪಂದ್ಯದಲ್ಲೂ ರನ್ ಗಳಿಸಿದ್ದ ತ್ರಿಶಾ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಮೂಲಕ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದ ತ್ರಿಶಾ ಅವರಿಗೆ ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿಯೂ ಲಭಿಸಿತ್ತು.

3 / 6
ಇದೀಗ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಈ ಉದಯೋನ್ಮುಖ ಮಹಿಳಾ ಕ್ರಿಕೆಟರ್ ತ್ರಿಷಾ ಅವರಿಗೆ 1 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಿದ್ದಾರೆ. ತೆಲಂಗಾಣದ ಭದ್ರಾಚಲಂ ನಿವಾಸಿಯಾಗಿರುವ ತ್ರಿಷಾ ಇಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ತ್ರಿಷಾ ಅವರ ಪ್ರದರ್ಶನ ಶ್ಲಾಘಿಸಿದ ರೇವಂತ್ ರೆಡ್ಡಿ, ಭವಿಷ್ಯದಲ್ಲಿ ಅವರು ದೇಶಕ್ಕಾಗಿ ತಮ್ಮ ಉತ್ತಮ ಪ್ರದರ್ಶನವನ್ನು ಮುಂದುವರಿಸಲಿ ಎಂದು ಅಭಿನಂದಿಸಿದರು.

4 / 6
2025 ರ ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಆಡಿದ 7 ಪಂದ್ಯಗಳ 7 ಇನ್ನಿಂಗ್ಸ್‌ಗಳಲ್ಲಿ ತ್ರಿಶಾ 76.25 ಮತ್ತು 147.34 ರ ಸರಾಸರಿಯಲ್ಲಿ 305 ರನ್ ಕಲೆಹಾಕಿದರು. ಇದರಲ್ಲಿ ಒಂದು ಶತಕವನ್ನೂ ಸಿಡಿಸಿದರು. ಈ ಮೂಲಕ ಈ ಪಂದ್ಯಾವಳಿಯ ಇತಿಹಾಸದಲ್ಲಿ ಶತಕ ಗಳಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದರು.

5 / 6
ಹಾಗೆಯೇ ಈ ಟೂರ್ನಿಯ ಒಂದೇ ಆವೃತ್ತಿಯಲ್ಲಿ 300 ರನ್‌ಗಳ ಗಡಿಯನ್ನು ಮುಟ್ಟಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೂ ತ್ರಿಶಾ ಪಾತ್ರರಾಗಿದ್ದರು. ಬ್ಯಾಟಿಂಗ್​ನಲ್ಲಿ ಮಾತ್ರವಲ್ಲದೆ ಬೌಲಿಂಗ್​ನಲ್ಲೂ ಮಿಂಚಿದ್ದ ತ್ರಿಶಾ, ಫೈನಲ್ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್‌ ಬೌಲ್ ಮಾಡಿ ಕೇವಲ 15 ರನ್‌ಗಳನ್ನು ಬಿಟ್ಟುಕೊಟ್ಟು 3 ವಿಕೆಟ್‌ಗಳನ್ನು ಕಬಳಿಸಿದ್ದರು.

6 / 6
Follow us
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ

ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ