- Kannada News Photo gallery Cricket photos GT, RCB, PBKS and MI teams to qualify for the IPL 2025 play-offs
IPL 2025: ಐಪಿಎಲ್ ಪ್ಲೇಆಫ್ಗೆ 4 ತಂಡಗಳು ಫೈನಲ್
IPL 2025 Playoffs: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಸುತ್ತು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 63 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 7 ಮ್ಯಾಚ್ಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನವೇ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಹಾಗೆಯೇ 6 ತಂಡಗಳು ಈಗಾಗಲೇ ಐಪಿಎಲ್ನಿಂದ ಹೊರಬಿದ್ದಿದೆ.
Updated on: May 22, 2025 | 7:42 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 63ನೇ ಪಂದ್ಯದ ಮುಕ್ತಾಯದೊಂದಿಗೆ 4 ತಂಡಗಳು ಪ್ಲೇಆಫ್ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಇದರೊಂದಿಗೆ 4 ತಂಡಗಳು ಮುಂದಿನ ಹಂತಕ್ಕೇರಿದರೆ, 6 ತಂಡಗಳ ಐಪಿಎಲ್ ಅಭಿಯಾನ ಅಂತ್ಯಗೊಂಡಂತಾಗಿದೆ. ಅದರಂತೆ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

ಗುಜರಾತ್ ಟೈಟಾನ್ಸ್ ತಂಡವು 18 ಅಂಕಗಳೊಂದಿಗೆ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ. ಶುಭ್ಮನ್ ಗಿಲ್ ನೇತೃತ್ವದ ಜಿಟಿ ಪಡೆಯು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇದೀಗ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ.

ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ ಒಟ್ಟಿ 17 ಅಂಕಗಳನ್ನು ಪಡೆದಿರುವ ಆರ್ಸಿಬಿ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಿದೆ.

ಇನ್ನು ಪಂಜಾಬ್ ಕಿಂಗ್ಸ್ ತಂಡ ಕೂಡ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿ ಆಡಿದ 12 ಪಂದ್ಯಗಳಲ್ಲಿ ಪಂಜಾಬ್ ಪಡೆ ಒಟ್ಟು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ 17 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.









