IPL 2025: ಐಪಿಎಲ್ ಪ್ಲೇಆಫ್​ಗೆ 4 ತಂಡಗಳು ಫೈನಲ್

Updated on: May 22, 2025 | 7:42 AM

IPL 2025 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 63 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 7 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನವೇ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಹಾಗೆಯೇ 6 ತಂಡಗಳು ಈಗಾಗಲೇ ಐಪಿಎಲ್​ನಿಂದ ಹೊರಬಿದ್ದಿದೆ.

1 / 6
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದ ಮುಕ್ತಾಯದೊಂದಿಗೆ 4 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇದರೊಂದಿಗೆ 4 ತಂಡಗಳು ಮುಂದಿನ ಹಂತಕ್ಕೇರಿದರೆ, 6 ತಂಡಗಳ ಐಪಿಎಲ್ ಅಭಿಯಾನ ಅಂತ್ಯಗೊಂಡಂತಾಗಿದೆ.  ಅದರಂತೆ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳು ಈ ಕೆಳಗಿನಂತಿದೆ...

2 / 6
ಗುಜರಾತ್ ಟೈಟಾನ್ಸ್ ತಂಡವು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಶುಭ್​​ಮನ್ ಗಿಲ್ ನೇತೃತ್ವದ ಜಿಟಿ ಪಡೆಯು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

3 / 6
ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ ಒಟ್ಟಿ 17 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಿದೆ.

4 / 6
ಇನ್ನು ಪಂಜಾಬ್ ಕಿಂಗ್ಸ್ ತಂಡ ಕೂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಬಾರಿ ಆಡಿದ 12 ಪಂದ್ಯಗಳಲ್ಲಿ ಪಂಜಾಬ್ ಪಡೆ ಒಟ್ಟು 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ರದ್ದಾಗಿದೆ. ಈ ಮೂಲಕ 17 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಇದೀಗ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

5 / 6
ಇನ್ನು ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ಈ ತಂಡಗಳು ದ್ವಿತೀಯ ಸುತ್ತಿನ ಪಂದ್ಯಗಳಲ್ಲಿ, ಅಂದರೆ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

6 / 6