- TV9 Kannada Kannada News Photos Cricket Photos GT vs CSK: Who should win today's match for RCB's sake
GT vs CSK: ಇಂದಿನ ಮ್ಯಾಚ್ನಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?
IPL 2026, GT vs CSK: ಐಪಿಎಲ್ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕಣಕ್ಕಿಳಿಯಲಿವೆ. ಅಹಮದಾಬಾದ್ನಲ್ಲಿ ನಡೆಯಲಿರುವ ಈ ಪಂದ್ಯವು ಸಿಎಸ್ಕೆ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಚೆನ್ನೈ ಪಡೆ ಸೋತರೆ ಐಪಿಎಲ್ ಪ್ಲೇಆಫ್ ರೇಸ್ನಿಂದ ಹೊರಬೀಳಲಿದೆ.
Updated on:May 21, 2026 | 10:50 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 66ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. (PC: IPL)

ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಗುಜರಾತ್ ಟೈಟಾನ್ಸ್ 18 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವ ಮೂಲಕ ಮೊದಲ ಕ್ವಾಲಿಫೈಯರ್ ಆಡುವ ಅವಕಾಶವನ್ನು ಹೆಚ್ಚಿಸಿಕೊಳ್ಳಬಹುದು. ಅತ್ತ ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಿದ್ದರೆ ಈ ಮ್ಯಾಚ್ನಲ್ಲಿ ಸಿಎಸ್ಕೆ ತಂಡ ಗೆಲ್ಲಲೇಬೇಕು. (PC: IPL)

ಹೀಗಾಗಿ ಎರಡೂ ತಂಡಗಳಿಂದ ಈ ಮ್ಯಾಚ್ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಈ ಪೈಪೋಟಿ ನಡುವೆ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಯಾರು ಗೆಲ್ಲಬೇಕು ಎಂದು ನೋಡುವುದಾದರೆ... ಚೆನ್ನೈ ಸೂಪರ್ ಕಿಂಗ್ಸ್. (PC: IPL)

ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಆರ್ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಆಡುವುದು ಖಚಿತವಾಗಲಿದೆ. ಏಕೆಂದರೆ ಇಂದಿನ ಪಂದ್ಯದಲ್ಲಿ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಸೋತರೆ, 18 ಅಂಕಗಳನ್ನು ಹೊಂದಿರುವ ಆರ್ಸಿಬಿ ಮೊದಲ ಕ್ವಾಲಿಫೈಯರ್ಗೆ ನೇರ ಅರ್ಹತೆ ಪಡೆಯಲಿದೆ. (PC: IPL)

ಏಕೆಂದರೆ ಪ್ರಸ್ತುತ ಸನ್ನಿವೇಶದಲ್ಲಿ 18 ಅಂಕಗಳನ್ನು ಪಡೆಯಲು ಅವಕಾಶ ಇರುವುದು ಸನ್ರೈಸರ್ಸ್ ಹೈದರಾಬಾದ್ ಹಾಗು ಗುಜರಾತ್ ಟೈಟಾನ್ಸ್ ತಂಡಗಳಿಗೆ ಮಾತ್ರ. ಇಲ್ಲಿ ಗುಜರಾತ್ ಟೈಟಾನ್ಸ್ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ. ಅತ್ತ ಆರ್ಸಿಬಿ ತಂಡವು ಕೊನೆಯ ಮ್ಯಾಚ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋತರೂ 18 ಅಂಕಗಳೊಂದಿಗೆ ಟಾಪ್-2 ನಲ್ಲೇ ಕಾಣಿಸಿಕೊಳ್ಳಲಿದೆ. (PC: IPL)

ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಈ ಮೂಲಕ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ಆರ್ಸಿಬಿ ಪಡೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದನ್ನು ಖಚಿತಪಡಿಸಿಕೊಳ್ಳಬಹುದು. (PC: IPL)
Published On - 10:41 am, Thu, 21 May 26

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



