AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಸೋಲಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ತಂಡದ ನಾಯಕನಿಗೆ ದಂಡದ ಶಿಕ್ಷೆ ನೀಡಲಾಗುತ್ತದೆ. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Mar 30, 2025 | 11:36 AM

Share
IPL 2025: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ.

1 / 5
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಪಂದ್ಯದ ವೇಳೆ ಬೌಂಡರಿ ಲೈನ್​ನಿಂದ ಒರ್ವ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

2 / 5
ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಹಾರ್ದಿಕ್ ಪಾಂಡ್ಯಗೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ, 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೇ ತಪ್ಪನ್ನು ಮುಂದಿನ ಪಂದ್ಯಗಳಲ್ಲಿ ಪುನರಾವರ್ತಿಸಿದರೆ, ಹಾರ್ದಿಕ್ ಪಾಂಡ್ಯ 24 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.

3 / 5
ಇದಕ್ಕೂ ಮುನ್ನ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿದ ಕಾರಣ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು.

4 / 5
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡವನ್ನು ಮುನ್ನಡೆಸಿದ್ದರು. ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಮತ್ತದೇ ತಪ್ಪನ್ನು ಪುನರಾವರ್ತಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 36 ರನ್​ಗಳಿಂದ ಸೋಲನುಭವಿಸಿದ್ದು, ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

5 / 5

Published On - 11:32 am, Sun, 30 March 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ