- Kannada News Photo gallery Cricket photos Hardik Pandya: ಸೋಲಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ..!
Hardik Pandya: ಸೋಲಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ..!
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ತಂಡದ ನಾಯಕನಿಗೆ ದಂಡದ ಶಿಕ್ಷೆ ನೀಡಲಾಗುತ್ತದೆ. ಅದರಂತೆ ಇದೀಗ ಹಾರ್ದಿಕ್ ಪಾಂಡ್ಯ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.
Updated on:Mar 30, 2025 | 11:36 AM

IPL 2025: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ.

ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಪಂದ್ಯದ ವೇಳೆ ಬೌಂಡರಿ ಲೈನ್ನಿಂದ ಒರ್ವ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಹಾರ್ದಿಕ್ ಪಾಂಡ್ಯಗೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ, 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೇ ತಪ್ಪನ್ನು ಮುಂದಿನ ಪಂದ್ಯಗಳಲ್ಲಿ ಪುನರಾವರ್ತಿಸಿದರೆ, ಹಾರ್ದಿಕ್ ಪಾಂಡ್ಯ 24 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.

ಇದಕ್ಕೂ ಮುನ್ನ ನಡೆದ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿದ ಕಾರಣ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡವನ್ನು ಮುನ್ನಡೆಸಿದ್ದರು. ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಮತ್ತದೇ ತಪ್ಪನ್ನು ಪುನರಾವರ್ತಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 36 ರನ್ಗಳಿಂದ ಸೋಲನುಭವಿಸಿದ್ದು, ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.
Published On - 11:32 am, Sun, 30 March 25



















