ಆಗಸ್ಟ್ 2024 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ಗಸ್ ಅಟ್ಕಿನ್ಸನ್ ಈವರೆಗೆ 11 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1852 ಎಸೆತಗಳನ್ನು ಎಸೆದಿರುವ ಅವರು ಒಟ್ಟು 52 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪಾದಾರ್ಪಣೆ ವರ್ಷದಲ್ಲೇ 50 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.