ಗಸ್ ಅಟ್ಕಿನ್ಸನ್ ಬೆಂಕಿ ಚೆಂಡಿಗೆ ಬುಮ್ರಾ ದಾಖಲೆ ಕ್ಲೀನ್ ಬೌಲ್ಡ್
New Zealand vs England: ಹ್ಯಾಮಿಲ್ಟನ್ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ವೇಗಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕೇವಲ 11 ಪಂದ್ಯಗಳಲ್ಲಿ 52 ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ವಿಶ್ವದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.
1 / 6
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಒಂದೇ ವರ್ಷ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸುವ ಮೂಲಕ. ಅಂದರೆ ಪಾದಾರ್ಪಣೆ ಮಾಡಿದ ಒಂದೇ ವರ್ಷದೊಳಗೆ 50+ ವಿಕೆಟ್ ಪಡೆದ ಇಂಗ್ಲೆಂಡ್‌ನ ಮೊದಲ ವೇಗಿ ಹಾಗೂ ವಿಶ್ವದ 2ನೇ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.
2 / 6
ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಗಸ್ ಅಟ್ಕಿನ್ಸನ್ ಒಟ್ಟು 4 ವಿಕೆಟ್ ಕಬಳಿಸಿದ್ದಾರೆ. ಈ ನಾಲ್ಕು ವಿಕೆಟ್‌ಗಳೊಂದಿಗೆ ಗಸ್ ಈ ವರ್ಷ 50 ವಿಕೆಟ್‌ಗಳನ್ನು ಪೂರೈಸಿದ್ದಾರೆ.
3 / 6
ಆಗಸ್ಟ್ 2024 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ಗಸ್ ಅಟ್ಕಿನ್ಸನ್ ಈವರೆಗೆ 11 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1852 ಎಸೆತಗಳನ್ನು ಎಸೆದಿರುವ ಅವರು ಒಟ್ಟು 52 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪಾದಾರ್ಪಣೆ ವರ್ಷದಲ್ಲೇ 50 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.
4 / 6
ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ವಿಶ್ವ ದಾಖಲೆ ಬರೆದಿದ್ದು ಆಸ್ಟ್ರೇಲಿಯಾ ವೇಗಿ ಟೆರ್ರಿ ಅಲ್ಡರ್ಮ್ಯಾನ್. 1981 ರಲ್ಲಿ ಪಾದಾರ್ಪಣೆ ಮಾಡಿದ್ದ ಟೆರ್ರಿ ಆ ವರ್ಷ 19 ಇನಿಂಗ್ಸ್ ಗಳಿಂದ 54 ವಿಕೆಟ್ ಕಬಳಿಸಿದ್ದರು. ಇದು ಇವತ್ತಿಗೂ ವಿಶ್ವ ದಾಖಲೆಯಾಗಿ ಉಳಿದಿದೆ.
5 / 6
ಇದಾದ ಬಳಿಕ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಈ ದಾಖಲೆಯ ಸನಿಹಕ್ಕೆ ತಲುಪಿದ್ದರು. 2018 ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಬುಮ್ರಾ 18 ಇನಿಂಗ್ಸ್ ಗಳಲ್ಲಿ 48 ವಿಕೆಟ್ ಕಬಳಿಸಿದ್ದರು. ಇದಾಗ್ಯೂ 50 ವಿಕೆಟ್‌ಗಳ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ.
6 / 6
ಇದೀಗ ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಮುರಿದು ಮುನ್ನುಗ್ಗುವ ಮೂಲಕ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡ್‌ನ ಮೊದಲ ಹಾಗೂ ವಿಶ್ವದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.