Team India: ಆಯ್ಕೆ ಸಮಿತಿಯಿಂದ ನಿರ್ಲಕ್ಷ; ತಂಡ ಬದಲಿಸಲು ಮುಂದಾದ ಟೆಸ್ಟ್ ಸ್ಪೆಷಲಿಸ್ಟ್..!

Team India: ಕಾಂಗರೂ ನಾಡಿನಲ್ಲಿ ಏಕಾಂಗಿಯಾಗಿ ನಿಂತು ಟೀಂ ಇಂಡಿಯಾವನ್ನು ಸೋಲಿನ ದವಡೆಯಿಂದ ಪಾರು ಮಾಡಿದ್ದ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಹನುಮ ವಿಹಾರಿಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶ ಸಿಗುತ್ತಿಲ್ಲ.

ಪೃಥ್ವಿಶಂಕರ
|

Updated on: Jul 02, 2023 | 12:23 PM

ಕಾಂಗರೂ ನಾಡಿನಲ್ಲಿ ಏಕಾಂಗಿಯಾಗಿ ನಿಂತು ಟೀಂ ಇಂಡಿಯಾವನ್ನು ಸೋಲಿನ ದವಡೆಯಿಂದ ಪಾರು ಮಾಡಿದ್ದ ಟೆಸ್ಟ್ ಸ್ಪೆಷಲಿಸ್ಟ್ ಖ್ಯಾತಿಯ ಹನುಮ ವಿಹಾರಿಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶ ಸಿಗುತ್ತಿಲ್ಲ. ಆಯ್ಕೆ ಮಂಡಳಿಯಿಂದ ತೀರ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಹಾರಿ ಇದೀಗ ದೇಶೀ ಕ್ರಿಕೆಟ್​ನತ್ತ ಮುಖಮಾಡಿದ್ದಾರೆ. ದೇಶೀ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿ ಭಾರತ ತಂಡಕ್ಕೆ ಮತ್ತೆ ಆಯ್ಕೆಯಾಗುವ ಗುರಿ ಹೊಂದಿರುವ ವಿಹಾರಿ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.

1 / 6
ಪ್ರಸ್ತುತ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ದಕ್ಷಿಣ ವಲಯ ತಂಡಗಳನ್ನು ಮುನ್ನಡೆಸುತ್ತಿರುವ ಹನುಮ ವಿಹಾರಿ ರಣಜಿ ಟ್ರೋಫಿಯಲ್ಲಿ ಹೊಸ ತಂಡದ ಪರ ಆಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಹನುಮ ವಿಹಾರಿ ಇದುವರೆಗೆ ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರಪ್ರದೇಶ ತಂಡದ ಪರ ಆಡುತ್ತಿದ್ದರು.

2 / 6
ಆದರೆ ಇದೀಗ ಆಂಧ್ರಪ್ರದೇಶ ತಂಡ ತೊರೆಯಲು ಮುಂದಾಗಿರುವ ವಿಹಾರ ಮಧ್ಯಪ್ರದೇಶ ತಂಡದ ಪರ ಆಡಲು ಸಿದ್ಧರಾಗಿದ್ದಾರೆ. ಆದರೆ ಅದಕ್ಕೂ ಮುನ್ನ ತಂಡವನ್ನು ಬದಲಾಯಿಸಲು ಮುಂದಾಗಿರುವ ವಿಹಾರಿ ಆಂಧ್ರಪ್ರದೇಶ ಕ್ರಿಕೆಟ್ ಮಂಡಳಿಯಿಂದ ಎನ್‌ಒಸಿ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆಯಬೇಕಿದೆ.

3 / 6
ಹನುಮ ವಿಹಾರಿ ಹೊಸ ತಂಡ ಸೇರುವುದರೊಂದಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಪುನರಾಗಮನ ಮಾಡಲು ಪ್ರಯತ್ನಿಸಲಿದ್ದಾರೆ. ಅಲ್ಲದೆ ವರದಿಯ ಪ್ರಕಾರ ಹನುಮ ವಿಹಾರಿ ಕೋಚ್ ಚಂದ್ರಕಾಂತ್ ಪಂಡಿತ್ ಅವರ ಮಾರ್ಗದರ್ಶನದಲ್ಲಿ ಆಡಲು ಬಯಸಿದ್ದಾರೆ. ಇದಕ್ಕಾಗಿ ವಿಹಾರಿ ತಂಡ ಬದಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

4 / 6
ಏತನ್ಮಧ್ಯೆ, ವಿಹಾರಿ ತಂಡವನ್ನು ಬದಲಾಯಿಸಿರುವುದು ಇದೇ ಮೊದಲಲ್ಲ. ತನ್ನ ವೃತ್ತಿಜೀವನವನ್ನು ಹೈದರಾಬಾದ್‌ ತಂಡದ ಪರ ಪ್ರಾರಂಭಿಸಿದ ವಿಹಾರಿ ನಂತರ 2015-16ರಲ್ಲಿ ಆಂಧ್ರಪ್ರದೇಶ ತಂಡವನ್ನು ಪ್ರತಿನಿಧಿಸಿದ್ದರು. ಆ ಬಳಿಕ 2021-11ರಲ್ಲಿ ಮತ್ತೆ ಹೈದರಾಬಾದ್‌ ತಂಡಕ್ಕೆ ಸೇರಿಕೊಂಡಿದ್ದರು. ನಂತರ ಕಳೆದ ಸೀಸನ್‌ನಲ್ಲಿ ಆಂಧ್ರಪ್ರದೇಶ ಪರ ಆಡಿದ್ದ ವಿಹಾರಿ ದೇಶೀಯ ಕ್ರಿಕೆಟ್‌ನಲ್ಲಿ ಆಂಧ್ರಪ್ರದೇಶ ತಂಡವನ್ನು ಮುನ್ನಡೆಸಿದ್ದರು.

5 / 6
ವಿಹಾರಿ ಇದುವರೆಗೆ 113 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಈ 113 ಪಂದ್ಯಗಳಲ್ಲಿ 54.41 ಸರಾಸರಿಯಲ್ಲಿ 8600 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 23 ಶತಕ ಮತ್ತು 45 ಅರ್ಧಶತಕಗಳು ಸೇರಿವೆ. ಅಲ್ಲದೆ ಟೀಂ ಇಂಡಿಯಾ ಪರ 16 ಟೆಸ್ಟ್ ಪಂದ್ಯಗಳನ್ನಾಡಿರುವ ವಿಹಾರಿ ಈ 16 ಟೆಸ್ಟ್ ಪಂದ್ಯಗಳಲ್ಲಿ 5 ಅರ್ಧಶತಕಗಳ ಸಹಾಯದಿಂದ 839 ರನ್ ಕಲೆ ಹಾಕಿದ್ದಾರೆ.

6 / 6
Follow us
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ