Yuvraj Singh: ರಾಜಕೀಯಕ್ಕೆ ಹರ್ಭಜನ್ ಸಿಂಗ್ ಮತ್ತು ಯುವರಾಜ್ ಸಿಂಗ್?
TV9 Web | Updated By: ಝಾಹಿರ್ ಯೂಸುಫ್
Updated on:
Dec 12, 2021 | 10:52 PM
Harbhajan Singh - Yuvraj Singh: 2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವು ಬಹುಮತವನ್ನು ಪಡೆದಿತ್ತು. ಈ ಮೂಲಕ 10 ವರ್ಷಗಳ ನಂತರ ಎಸ್‌ಎಡಿ-ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಹೊರಗಿಡುವಲ್ಲಿ ಯಶಸ್ವಿಯಾಗಿತ್ತು.
1 / 7
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ಮತದಾರರನ್ನು ಸೆಳೆಯಲು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೆಲವು ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಇದ್ದಾರೆ ಎಂದು ವರದಿಯೊಂದು ತಿಳಿಸಿದೆ.
2 / 7
ಈ ಬಗ್ಗೆ ಮಾತನಾಡಿರುವ ಪಂಜಾಬ್ನ ಹಿರಿಯ ಬಿಜೆಪಿ ನಾಯಕರೊಬ್ಬರು, ಯುವರಾಜ್ ಸಿಂಗ್ ಹಾಗೂ ಹರ್ಭಜನ್ ಸಿಂಗ್ ಹೆಸರು ನಮ್ಮ ಲೀಸ್ಟ್ನಲ್ಲಿದೆ. ಈ ಇಬ್ಬರು ಭಾರತೀಯ ಕ್ರಿಕೆಟಿಗರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
3 / 7
ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಇಬ್ಬರು ಭಾರತೀಯ ಮಾಜಿ ಕ್ರಿಕೆಟಿಗರಿಗೆ ಬಿಜೆಪಿ ಟಿಕೆಟ್ ಆಫರ್ ನೀಡಲಿದೆ. ಇದಾಗ್ಯೂ ಯುವಿ ಹಾಗೂ ಭಜ್ಜಿ ಸ್ಪರ್ಧಿಸಲು ಒಪ್ಪದಿದ್ದರೆ, ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಾಗಿ ಬಳಸಿಕೊಳ್ಳಲು ಮುಂದಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
4 / 7
ಇತ್ತೀಚೆಗೆಷ್ಟೇ ಹರ್ಭಜನ್ ಸಿಂಗ್ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದ್ದು, ಇನ್ನೊಂದೆಡೆ ಫೆಬ್ರವರಿಯಲ್ಲಿ ಯುವರಾಜ್ ಸಿಂಗ್ ಹೊಸ ಇನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಇದೀಗ ಈ ಇಬ್ಬರು ಆಟಗಾರರ ಹೆಸರಿನೊಂದಿಗೆ ಬಿಜೆಪಿ ಪಕ್ಷ ಹೆಸರು ತಳುಕುಹಾಕಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರ ಮುಂದಿನ ನಡೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
5 / 7
ಅಮರಿಂದರ್ ಸಿಂಗ್
6 / 7
2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವು ಬಹುಮತವನ್ನು ಪಡೆದಿತ್ತು. ಈ ಮೂಲಕ 10 ವರ್ಷಗಳ ನಂತರ ಎಸ್‌ಎಡಿ-ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಹೊರಗಿಡುವಲ್ಲಿ ಯಶಸ್ವಿಯಾಗಿತ್ತು. ಇನ್ನು 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆದ್ದು ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಪಡೆದುಕೊಂಡಿದೆ.
7 / 7
ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕೆಲ ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ವರ್ಚಸ್ಸು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದೆ ಪಂಜಾಬ್ ಬಿಜೆಪಿ. ಅದರಂತೆ ಈಗಾಗಲೇ ಸೆಲೆಬ್ರಿಟಿಗಳ ಪಟ್ಟಿ ಸಿದ್ದವಾಗುತ್ತಿದ್ದು, ಆ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಹಾಗೂ ಯುವರಾಜ್ ಸಿಂಗ್ ಹೆಸರು ಮುಂಚೂಣಿಯಲ್ಲಿರುವುದು ವಿಶೇಷ.
Published On - 4:06 pm, Sun, 12 December 21