AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ

Hardik Pandya Smashes 16-Ball Fifty: ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೇವಲ 16 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದರು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ಎರಡನೇ ಅತಿ ವೇಗದ ಅರ್ಧಶತಕವಾಗಿದೆ. 25 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 63 ರನ್ ಗಳಿಸಿದ ಪಾಂಡ್ಯ, ತಿಲಕ್ ವರ್ಮಾ ಜೊತೆಗೂಡಿ ತಂಡಕ್ಕೆ 231 ರನ್‌ಗಳ ಬೃಹತ್ ಮೊತ್ತ ಗಳಿಸಲು ನೆರವಾದರು.

ಪೃಥ್ವಿಶಂಕರ
|

Updated on: Dec 19, 2025 | 9:16 PM

Share
ದಕ್ಷಿಣ ಆಫ್ರಿಕಾ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಪಾಂಡ್ಯ ದಾಖಲೆಯ ಇನ್ನಿಂಗ್ಸ್ ಆಡಿದರು.

1 / 6
ನಾಯಕ ಸೂರ್ಯಕುಮಾರ್ ಯಾದವ್ ಔಟಾದ ಬಳಿಕ ಕ್ರೀಸ್​ಗೆ ಬಂದ ಹಾರ್ದಿಕ್, ಮೊದಲ ಎಸೆತದಿಂದಲೇ ಬೌಂಡರಿ ಸಿಕ್ಸರ್‌ಗಳ ಮಳೆ ಸುರಿಸಲು ಶುರು ಮಾಡಿದರು. ಇದರ ಪರಿಣಾಮವಾಗಿ ಪಾಂಡ್ಯ, ಕೇವಲ 16 ಎಸೆತಗಳಲ್ಲಿ 50 ರನ್​ಗಳ ಗಡಿ ದಾಟಿದರು. ಇನ್ನೊಂದು ವಿಶೇಷವೆಂದರೆ, ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಆರಂಭಿಸಿದ ಪಾಂಡ್ಯ, ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು.

2 / 6
ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನ ಅತಿ ವೇಗದ ಅರ್ಧಶತಕ ಬಾರಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಪಾಂಡ್ಯಗೂ ಮೊದಲು 2007 ರ ಟಿ20 ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಇಂಗ್ಲೆಂಡ್ ವಿರುದ್ಧ ಕೇವಲ 12 ಎಸೆತಗಳಲ್ಲಿ 50 ರನ್ ಬಾರಿಸಿದರು. ಇದು ಈವರೆಗಿನ ದಾಖಲೆಯಾಗಿದೆ.

3 / 6
ಭಾರತದ ಪರ ಅತಿ ವೇಗದ ಅಂತರರಾಷ್ಟ್ರೀಯ ಅರ್ಧಶತಕ ಸಿಡಿಸಿದ ದಾಖಲೆಯ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅಗ್ರಸ್ಥಾನದಲ್ಲಿದ್ದರೆ, ಇದೀಗ ಹಾರ್ದಿಕ್ ಪಾಂಡ್ಯ ಎರಡನೇ ಸ್ಥಾನಕ್ಕೇರಿದ್ದಾರೆ. ಮೂರನೇ ಸ್ಥಾನದಲ್ಲಿರುವ ಆರಂಭಿಕ ಅಭಿಷೇಕ್ ಶರ್ಮಾ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದ ಕೆಎಲ್ ರಾಹುಲ್ 4ನೇ ಸ್ಥಾನದಲ್ಲಿದ್ದರೆ, 18 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ಸೂರ್ಯಕುಮಾರ್ ಯಾದವ್ 5ನೇ ಸ್ಥಾನದಲ್ಲಿದ್ದಾರೆ.

4 / 6
ಇನ್ನು ಈ ಇನ್ನಿಂಗ್ಸ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಹಾರ್ದಿಕ್ ಪಾಂಡ್ಯ, 25 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಸಹಿತ 63 ರನ್ ಬಾರಿಸಿ 20ನೇ ಓವರ್​ನಲ್ಲಿ ಸಿಕ್ಸರ್ ಹೊಡೆಯುವ ಯತ್ನದಲ್ಲಿ ಕ್ಯಾಚಿತ್ತು ಔಟಾದರು. ಹಾರ್ದಿಕ್ ಅರ್ಧಶತಕ ಬಾರಿಸುವುದರ ಜೊತೆಗೆ ತಿಲಕ್ ವರ್ಮಾ ಅವರೊಂದಿಗೆ 105 ರನ್​ಗಳ ಜೊತೆಯಾಟವನ್ನು ಕಟ್ಟಿದರು.

5 / 6
ಹಾರ್ದಿಕ್ ಜೊತೆಗೆ ತಿಲಕ್ ವರ್ಮಾ ಕೂಡ 73 ರನ್​ಗಳ ಇನ್ನಿಂಗ್ಸ್ ಆಡಿದರು. ಆರಂಭಿಕ ಸಂಜು 37 ರನ್​ ಬಾರಿಸಿದರೆ, ಅಭಿಷೇಕ್ ಶರ್ಮಾ ಕೂಡ 34 ರನ್​ಗಳ ಕಾಣಿಕೆ ನೀಡಿದರು. ಈ ನಾಲ್ವರು ಇನ್ನಿಂಗ್ಸ್​ನಿಂದಾಗಿ ಟೀಂ ಇಂಡಿಯಾ 231 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ.

6 / 6
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ

ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ

ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ

49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್

ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ