- Kannada News Photo gallery Cricket photos hardik pandya and suryakumar yadav doubtful for upcoming IND vs AFG t20i series
IND vs AFG: ಅಫ್ಘಾನ್ ವಿರುದ್ಧದ ಟಿ20 ಸರಣಿಗೆ ಸೂರ್ಯ, ಹಾರ್ದಿಕ್ ಅನುಮಾನ..!
IND vs AFG: ವಾಸ್ತವವಾಗಿ ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಟಿ20 ಪಂದ್ಯಗಳ ಸರಣಿ ನಡೆಯಲಿದ್ದು, ಜನವರಿ 11ರಿಂದ ಈ ಸರಣಿಯ ಮೊದಲ ಪಂದ್ಯ ನಡೆಯಲ್ಲಿದೆ. ಆದರೆ ಈ ಸರಣಿಗೆ ಟೀಂ ಇಂಡಿಯಾದ ಇಬ್ಬರು ಅನುಭವಿ ಆಟಗಾರರು ಅಲಭ್ಯರಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
Updated on: Jan 05, 2024 | 4:05 PM

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿರುವ ಟೀಂ ಇಂಡಿಯಾ ಶೀಘ್ರದಲ್ಲೇ ತವರಿಗೆ ಮರಳಲಿದೆ. ಆ ಬಳಿಕ ಟಿ20 ವಿಶ್ವಕಪ್ನ ತಯಾರಿ ಎನಿಸಿಕೊಂಡಿರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ನಿರತವಾಗಲಿದೆ. ಆದರೆ ಅದಕ್ಕೂ ಮುನ್ನ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.

ವಾಸ್ತವವಾಗಿ ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ ನಡುವೆ ಮೂರು ಟಿ20 ಪಂದ್ಯಗಳ ಸರಣಿ ನಡೆಯಲಿದ್ದು, ಜನವರಿ 11ರಿಂದ ಈ ಸರಣಿಯ ಮೊದಲ ಪಂದ್ಯ ನಡೆಯಲ್ಲಿದೆ. ಆದರೆ ಈ ಸರಣಿಗೆ ಟೀಂ ಇಂಡಿಯಾದ ಇಬ್ಬರು ಅನುಭವಿ ಆಟಗಾರರು ಅಲಭ್ಯರಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ವಾಸ್ತವವಾಗಿ, ಏಕದಿನ ವಿಶ್ವಕಪ್ ಸಂದರ್ಭದಲ್ಲಿ ಗಾಯಗೊಂಡಿದ್ದ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶೀಘ್ರದಲ್ಲೇ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಪಾಂಡ್ಯ ಇನ್ನೂ ಸಹ ತಂಡದೊಂದಿಗೆ ಕಾಣಿಸಿಕೊಂಡಿಲ್ಲ.

ವಿಶ್ವಕಪ್ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಿತ್ತು. ಇದರ ನಂತರ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಟಿ20 ಮತ್ತು ಮೂರು ಏಕದಿನ ಮತ್ತು 2 ಟೆಸ್ಟ್ ಪಂದ್ಯಗಳನ್ನು ಆಡಿತು. ಆದರೆ ಹಾರ್ದಿಕ್ ಪಾಂಡ್ಯ ಇಲ್ಲಿಯವರೆಗೆ ಪುನರಾಗಮನ ಮಾಡಲು ವಿಫಲರಾಗಿದ್ದಾರೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಸರಣಿಗೂ ಮುನ್ನ ಅವರು ಫಿಟ್ ಆಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಹಾರ್ದಿಕ್ ಪಾಂಡ್ಯ ಬಗ್ಗೆ ಸಂಬಂಧಿಸಿದ ಇತ್ತೀಚಿನ ವರದಿಗಳನ್ನು ನೋಡುವುದಾದರೆ ಅವರು ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿಯನ್ನು ಆಡಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ.

ಮುಂಬರುವ ಸರಣಿಯಲ್ಲಿ ಪಾಂಡ್ಯ ಜೊತೆಗೆ ಸೂರ್ಯಕುಮಾರ್ ಯಾದವ್ ಕೂಡ ಆಡುವುದು ತುಂಬಾ ಕಷ್ಟಕರವಾಗಿದೆ. ಸೂರ್ಯಕುಮಾರ್ ಯಾದವ್ ಆಸ್ಟ್ರೇಲಿಯಾ ಮತ್ತು ನಂತರ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡದ ನಾಯಕತ್ವ ವಹಿಸಿಕೊಂಡರು. ಆದರೆ ಅದೇ ಸರಣಿಯ ಕೊನೆಯ ಪಂದ್ಯದಲ್ಲಿ ಅವರು ಗಾಯಗೊಂಡರು.

ಅವರ ಬಗ್ಗೆ ಯಾವುದೇ ಔಪಚಾರಿಕ ಅಪ್‌ಡೇಟ್ ಹೊರಬಂದಿಲ್ಲವಾದರೂ ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ ಸರಣಿಯಲ್ಲಿ ಟೀಂ ಇಂಡಿಯಾದ ಭಾಗವಾಗುವುದಿಲ್ಲ ಎಂಬ ವರದಿಗಳು ಕೇಳಿಬರುತ್ತಿವೆ. ಹೀಗಾಗಿ ಮಧ್ಯಮ ಕ್ರಮಾಂಕದ ಇಬ್ಬರು ಸ್ಟಾರ್ ಆಟಗಾರರಿಲ್ಲದೇ ಭಾರತ ತಂಡ ಮುಂದಿನ ಸರಣಿಯಲ್ಲಿ ಫೀಲ್ಡಿಂಗ್ ಮಾಡಬೇಕಾಗಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿ ಜನವರಿ 11 ರಿಂದ ಮೊಹಾಲಿಯಲ್ಲಿ ಸರಣಿ ಪ್ರಾರಂಭವಾಗಲಿದ್ದು, ಮುಂದಿನ ಒಂದರಿಂದ ಎರಡು ದಿನಗಳಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆಗಳಿವೆ. ತಂಡದ ನಾಯಕತ್ವವನ್ನು ಯಾರು ತೆಗೆದುಕೊಳ್ಳುತ್ತಾರೆ ಮತ್ತು ಯಾವ ಆಟಗಾರರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.




