
ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್ನಲ್ಲಿ ಸೋತ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳು ವಿಶ್ರಾಂತಿಯ ಬಳಿಕ ಮತ್ತೆ ಮುಖಾಮುಖಿ ಆಗುತ್ತಿದೆ. ಇಂದು ವೆಲ್ಲಿಂಗ್ಟನ್ನ ಸ್ಕೈ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.

ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಉತ್ಸಾಹಿ ತರುಣರೇ ಇರುವ ಭಾರತ ತಂಡ 3 ಪಂದ್ಯಗಳ ಟಿ20 ಪಂದ್ಯವನ್ನಾಡಲಿದೆ. ಹಾರ್ದಿಕ್ ಪಾಂಡ್ಯ ನಾಯಕನಾಗಿದ್ದಾರೆ.

ಟೀಮ್ ಇಂಡಿಯಾ ಪರ ಓಪನರ್ಗಳಾಗಿ ಯಾರು ಆಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ರಿಷಬ್ ಪಂತ್, ಇಶಾನ್ ಕಿಶನ್ ಮತ್ತು ಶುಭ್‌ಮನ್ ಗಿಲ್ ಎಂಬ ಮೂರು ಆಯ್ಕೆಗಳಿವೆ. ಸಂಜು ಸ್ಯಾಮ್ಸನ್ ಮಿಂಚಬೇಕಾದ ಒತ್ತಡದಲ್ಲಿದ್ದಾರೆ.

ಹರ್ಷಲ್ ಪಟೇಲ್ ಮತ್ತು ಮೊಹಮ್ಮದ್ ಸಿರಾಜ್ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಅಂತೆಯೆ ಟಿ20 ವಿಶ್ವಕಪ್ನಲ್ಲಿ ಒಂದೂ ಪಂದ್ಯವನ್ನು ಆಡದ ಯುಜ್ವೇಂದ್ರ ಚಹಲ್ ಇಂದು ಕಣಕ್ಕಿಳಿಯಲಿದ್ದಾರೆ.

ಭುವನೇಶ್ವರ್ ಕುಮಾರ್ ಮತ್ತು ಅರ್ಷದೀಪ್ ಸಿಂಗ್ ಹೊಸ ಚೆಂಡಿನೊಂದಿಗೆ ದಾಳಿ ಆರಂಭಿಸುವ ನಿರೀಕ್ಷೆಯಿದೆ

ವೆಲ್ಲಿಂಗ್ಟನ್ನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು. ವೆಲ್ಲಿಂಗ್ಟನ್ ಬಿಡುಗಡೆ ಮಾಡಿರುವ ಹವಾಮಾನ ವರದಿಯ ಪ್ರಕಾರ, ಪಂದ್ಯದ ದಿನ ಬೆಳಗ್ಗೆ ಶೇ. 98 ರಷ್ಟು ಮಳೆ ಆಗಲಿದೆ ಎಂದು ಹೇಳಿದೆ.

ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.