- Kannada News Photo gallery Cricket photos Hardik Pandya became second captain to lose first three matches as Mumbai Indians captain
MI vs RR: ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಶಾಕ್: ಅತಿ ಕೆಟ್ಟ ದಾಖಲೆ ಬರೆದ ಮುಂಬೈ ನಾಯಕ
Hardik Pandya: ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿನ ಮೂಲಕ ಹಾರ್ದಿಕ್ ಪಾಂಡ್ಯ ಅತಿ ಕೆಟ್ಟ ದಾಖಲೆ ಬರೆದಿದ್ದಾರೆ. ಮುಂಬೈ ಇಂಡಿಯನ್ಸ್ ನಾಯಕನಾಗಿ ಸತತ ಮೂರನೇ ಪಂದ್ಯವನ್ನು ಕಳೆದುಕೊಂಡ ನಂತರ, ಹಾರ್ದಿಕ್ ಈ ಹಿಂದೆ ಹರ್ಭಜನ್ ಸಿಂಗ್ ಹೊಂದಿದ್ದ ಅನಗತ್ಯ ದಾಖಲೆಯನ್ನು ಸರಿಗಟ್ಟಿದರು.
Updated on: Apr 02, 2024 | 10:51 AM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ (ಏಪ್ರಿಲ್ 1) ನಡೆದ ಐಪಿಎಲ್ 2024 ರ ಪಂದ್ಯ ನಂ. 14 ರಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಿತ್ತು. ತಮ್ಮ ಮೊದಲ ಹೋಮ್ ಪಂದ್ಯದಲ್ಲಿ, ಮುಂಬೈ ಆರು ವಿಕೆಟ್‌ಗಳಿಂದ ಸೋಲು ಕಂಡಿತು. ಈ ಮೂಲಕ ಹಾರ್ದಿಕ್ ಪಾಂಡ್ಯ ಪಡೆ ಈ ಬಾರಿಯ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲು ಅನುಭವಿಸಿತು.

ಈ ಸೋಲಿನ ಮೂಲಕ ಹಾರ್ದಿಕ್ ಪಾಂಡ್ಯ ಅತಿ ಕೆಟ್ಟ ದಾಖಲೆ ಬರೆದಿದ್ದಾರೆ. ಮುಂಬೈ ಇಂಡಿಯನ್ಸ್ ನಾಯಕನಾಗಿ ಸತತ ಮೂರನೇ ಪಂದ್ಯವನ್ನು ಕಳೆದುಕೊಂಡ ನಂತರ, ಹಾರ್ದಿಕ್ ಈ ಹಿಂದೆ ಹರ್ಭಜನ್ ಸಿಂಗ್ ಹೊಂದಿದ್ದ ಅನಗತ್ಯ ದಾಖಲೆಯನ್ನು ಸರಿಗಟ್ಟಿದರು. 30ರ ಹರೆಯದ ಅವರು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ನಾಯಕರಾಗಿ ಮೊದಲ ಮೂರು ಪಂದ್ಯಗಳಲ್ಲಿ ಸೋತ ಎರಡನೇ ನಾಯಕರಾದರು.

ಮಾರ್ಚ್ 24 ರಂದು ಅಹ್ಮದಾಬಾದ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ನಾಯಕನಾಗಿ ಹಾರ್ದಿಕ್ ತನ್ನ ಮೊದಲ ಪಂದ್ಯದಲ್ಲಿ ಆರು ರನ್‌ಗಳಿಂದ ಸೋತರು. ಮಾರ್ಚ್ 27 ರಂದು ಹೈದರಾಬಾದ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 31 ರನ್‌ಗಳಿಂದ ಮುಂಬೈ ಇಂಡಿಯನ್ಸ್ ಅನ್ನು ಸೋಲಿಸಿತು.

ಈ ಹಿಂದೆ 2008 ರಲ್ಲಿ ಐಪಿಎಲ್‌ನ ಉದ್ಘಾಟನಾ ಆವೃತ್ತಿಯಲ್ಲಿ, ಹರ್ಭಜನ್ ಸಿಂಗ್ ಮೊದಲ ಮೂರು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಮುನ್ನಡೆಸಿದರು. ಆಗ ಆರ್ಸಿಬಿ ವಿರುದ್ಧ ಐದು ವಿಕೆಟ್‌ಗಳಿಂದ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರು ರನ್‌ಗಳು ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 66 ರನ್‌ಗಳಿಂದ ಸೋಲು ಅನುಭವಿಸಿತ್ತು.

ಹರ್ಭಜನ್ ಸಿಂಗ್ ಐಪಿಎಲ್ 2008ರಲ್ಲಿ ಮುಂಬೈ ಇಂಡಿಯನ್ಸ್ನ ಮೊದಲ ನಾಯಕರಾಗಿದ್ದರು. ನಂತರ ಮುಂಬೈ ತಂಡವನ್ನು ಶಾನ್ ಪೊಲಾಕ್, ಸಚಿನ್ ತೆಂಡೂಲ್ಕರ್, ಡ್ವೇನ್ ಬ್ರಾವೋ, ರಿಕಿ ಪಾಂಟಿಂಗ್, ರೋಹಿತ್ ಶರ್ಮಾ, ಕೀರಾನ್ ಪೊಲಾರ್ಡ್ ಮತ್ತು ಸೂರ್ಯಕುಮಾರ್ ಯಾದವ್ ಮುನ್ನಡೆಸಿದ್ದಾರೆ. ಸದ್ಯ ಹಾರ್ದಿಕ್ ಕ್ಯಾಪ್ಟನ್ ಆಗಿದ್ದಾರೆ.

ಸೋಮವಾರ ನಡೆದ ಪಂದ್ಯದಲ್ಲಿ ಮುಂಬೈ ತಂಡ ಕೇವಲ 125 ರನ್ ಗಳಿಸಲಷ್ಟೇ ಶಕ್ತವಾಯಿತು. ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ ಆರಂಭದಲ್ಲಿ 48 ರನ್ಗಳಿಗೆ 3 ವಿಕೆಟ್ ಕಳೆದುಕೊಂಡಿತಾದರೂ ನಂತರ ರಿಯಾನ್ ಪರಾಗ್ ಕ್ರೀಸ್‌ನಲ್ಲಿ ನಿಂತು 39 ಎಸೆತಗಳಲ್ಲಿ ಅಜೇಯ 54 ರನ್ ಗಳಿಸಿ ರಾಜಸ್ಥಾನಕ್ಕೆ ಪಂದ್ಯವನ್ನು ಗೆಲ್ಲಿಸಿದರು.



















