Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

| Updated By: ಝಾಹಿರ್ ಯೂಸುಫ್

Updated on: Apr 11, 2022 | 10:33 PM

IPL 2022 Records: ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ ಐಪಿಎಲ್​ನಲ್ಲಿ 357 ಸಿಕ್ಸ್ ಬಾರಿಸಿದ್ದಾರೆ. ಇನ್ನು 2ನೇ ಸ್ಥಾನದಲ್ಲಿ ಎಬಿ ಡಿವಿಲಿಯರ್ಸ್ ಇದ್ದು, ಎಬಿಡಿ 251 ಸಿಕ್ಸ್ ಸಿಡಿಸಿದ್ದಾರೆ.

1 / 5
ಐಪಿಎಲ್​ನ 21ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ವಿಶೇಷ ದಾಖಲೆ ಬರೆದಿದ್ದಾರೆ. ಎಸ್​ಆರ್​ಹೆಚ್ ವಿರುದ್ದ ನಡೆದ ಈ ಪಂದ್ಯದಲ್ಲಿ ಒಂದು ಸಿಕ್ಸ್ ಬಾರಿಸುವ ಮೂಲಕ ಪಾಂಡ್ಯ ಐಪಿಎಲ್​ನಲ್ಲಿ 100 ಸಿಕ್ಸ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದರು.

2 / 5
ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ವೇಗವಾಗಿ 100 ಸಿಕ್ಸ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಕೂಡ ಅಲಂಕರಿಸಿದ್ದಾರೆ. ವಿಶೇಷ ಎಂದರೆ ಐಪಿಎಲ್​ನಲ್ಲಿ ಅತೀ ವೇಗವಾಗಿ 100 ಸಿಕ್ಸ್ ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನು ಹಾರ್ದಿಕ್ ಪಾಂಡ್ಯ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಐಪಿಎಲ್​ನಲ್ಲಿ ಅತೀ ವೇಗವಾಗಿ 100 ಸಿಕ್ಸ್ ಬಾರಿಸಿದ ದಾಖಲೆ ಆಂಡ್ರೆ ರಸೆಲ್ ಹೆಸರಿನಲ್ಲಿದೆ. ರಸೆಲ್ 657 ಎಸೆತಗಳನ್ನು ಎದುರಿಸಿ 100 ಸಿಕ್ಸ್ ಪೂರೈಸಿದ್ದರು. 2ನೇ ಸ್ಥಾನದಲ್ಲಿ ಕ್ರಿಸ್ ಗೇಲ್ ಇದ್ದು, ಯುನಿವರ್ಸ್ ಬಾಸ್ ಗೇಲ್ 943 ಎಸೆತಗಳಲ್ಲಿ 100 ಸಿಕ್ಸ್ ಬಾರಿಸಿದ್ದರು.

4 / 5
 ಇದೀಗ 1046 ಎಸೆತಗಳನ್ನು ಎದುರಿಸಿರುವ ಹಾರ್ದಿಕ್ ಪಾಂಡ್ಯ 100 ಸಿಕ್ಸ್ ಪೂರೈಸಿದ್ದಾರೆ. ಈ ಮೂಲಕ ಸಿಕ್ಸರ್​ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ ವೇಗವಾಗಿ 100 ಸಿಕ್ಸ್ ಪೂರೈಸಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು. ಪಂತ್ 1224 ಎಸೆತಗಳಲ್ಲಿ 100 ಸಿಕ್ಸ್ ಪೂರೈಸಿದ್ದರು. ಇದೀಗ ಪಾಂಡ್ಯ 1046 ಎಸೆತಗಳಲ್ಲಿ ಈ ಮೈಲುಗಲ್ಲನ್ನು ಮುಟ್ಟಿದ್ದಾರೆ.

5 / 5
ಸದ್ಯ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ ಐಪಿಎಲ್​ನಲ್ಲಿ 357 ಸಿಕ್ಸ್ ಬಾರಿಸಿದ್ದಾರೆ. ಇನ್ನು 2ನೇ ಸ್ಥಾನದಲ್ಲಿ ಎಬಿ ಡಿವಿಲಿಯರ್ಸ್ ಇದ್ದು, ಎಬಿಡಿ 251 ಸಿಕ್ಸ್ ಸಿಡಿಸಿದ್ದಾರೆ.  ಇನ್ನು ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದಾರೆ. ಹಿಟ್​ಮ್ಯಾನ್ ಒಟ್ಟು 231 ಸಿಕ್ಸ್ ಸಿಡಿಸಿ ದಾಖಲೆ ಬರೆದಿದ್ದಾರೆ. ಇದೀಗ ವೇಗವಾಗಿ 100 ಸಿಕ್ಸ್ ಪೂರೈಸುವ ಮೂಲಕ ಹಾರ್ದಿಕ್ ಪಾಂಡ್ಯ ಸಿಕ್ಸ್​ಗಳ ದಾಖಲೆಗಳಿಗೆ ಎಂಟ್ರಿ ಕೊಟ್ಟಿದ್ದಾರೆ.