Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್ ಪಾಂಡ್ಯ ಪವರ್​ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್

India vs England, 4th T20I: ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಹಾರ್ದಿಕ್ ಪಾಂಡ್ಯ (53) ಹಾಗೂ ಶಿವಂ ದುಬೆ (53) ಅವರ ಅರ್ಧಶತಕದ ನೆರವಿನಿಂದ 20 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 19.4 ಓವರ್​ಗಳಲ್ಲಿ 166 ರನ್​ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Feb 01, 2025 | 7:53 AM

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ ತಂಡ 15 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 12 ರನ್​ಗಳಿಸುವಷ್ಟರಲ್ಲಿ ಭಾರತ ತಂಡದ ಟಾಪ್-3 ಬ್ಯಾಟರ್​ಗಳು ಪೆವಿಲಿಯನ್​ಗೆ ಮರಳಿದ್ದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

1 / 6
ಅದರಲ್ಲೂ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್​​ನೊಂದಿಗೆ ಗಮನ ಸೆಳೆದರು. ಇಂಗ್ಲೆಂಡ್ ಬೌಲರ್​​ಗಳನ್ನು ಮನಸೋ ಇಚ್ಛೆ ದಂಡಿಸಿದ ಪಾಂಡ್ಯ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 53 ರನ್ ಬಾರಿಸಿ 18ನೇ ಓವರ್​​ನಲ್ಲಿ ಔಟಾದರು.

2 / 6
ಹೀಗೆ ಔಟಾಗುವ ಮುನ್ನ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಡೆತ್​ ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇದೀಗ ಪಾಂಡ್ಯ ಪಾಲಾಗಿದೆ.

3 / 6
ಇದಕ್ಕೂ ಮುನ್ನ ಈ ವಿಶೇಷ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 16 ರಿಂದ 20 ಓವರ್​ಗಳ ನಡುವೆ ಒಟ್ಟು 1032 ರನ್ ಕಲೆಹಾಕಿ, ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ  ಡೆತ್​ ಓವರ್​ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 6
ಇದೀಗ ಇಂಗ್ಲೆಂಡ್ ವಿರುದ್ಧ ಡೆತ್ ಓವರ್​​ಗಳಲ್ಲಿ ಅಬ್ಬರಿಸುವ ಮೂಲಕ ಹಾರ್ದಿಕ್ ಪಾಂಡ್ಯ ಈ ದಾಖಲೆಯನ್ನು ಮುರಿದಿದ್ದಾರೆ. ಪಾಂಡ್ಯ 16 ರಿಂದ 20 ಓವರ್​ಗಳ ನಡುವೆ ಈವರೆಗೆ 1068 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಡೆತ್ ಓವರ್​ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 5 ಅರ್ಧಶತಕ, 1500+ ರನ್ಸ್, 90+ ವಿಕೆಟ್ ಪಡೆದ ಭಾರತದ ಮೊದಲ ಆಲ್​ರೌಂಡರ್ ಎಂಬ ಹೆಗ್ಗಳಿಕೆಗೂ ಹಾರ್ದಿಕ್ ಪಾಂಡ್ಯ ಪಾತ್ರರಾಗಿದ್ದಾರೆ. ಅಲ್ಲದೆ ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್), ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್) ಹಾಗೂ ಸಿಕಂದರ್ ರಾಝ (ಝಿಂಬಾಬ್ವೆ) ನಂತರ ಈ ಸಾಧನೆ ಮಾಡಿದ ವಿಶ್ವದ 4ನೇ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

6 / 6
Follow us
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ

ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ