Hardik Pandya: ನಾಯಕನಾಗಿ ರೋಹಿತ್ ಶರ್ಮಾರ ದಾಖಲೆ ಮುರಿದ ಹಾರ್ದಿಕ್ ಪಾಂಡ್ಯ
TV9 Web | Updated By: ಝಾಹಿರ್ ಯೂಸುಫ್
Updated on:
Jan 04, 2023 | 8:30 PM
India vs Sri Lanka: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಶ್ರೀಲಂಕಾ ತಂಡವು 160 ರನ್ಗಳಿಸಲಷ್ಟೇ ಶಕ್ತರಾದರು.
1 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 162 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಶ್ರೀಲಂಕಾ ತಂಡವು 160 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೀಮ್ ಇಂಡಿಯಾ 2 ರನ್ಗಳ ರೋಚಕ ಜಯ ಸಾಧಿಸಿ ಹೊಸ ವರ್ಷದಲ್ಲಿ ಶುಭಾರಂಭ ಮಾಡಿದೆ.
2 / 5
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿರುವುದು ವಿಶೇಷ.
3 / 5
ಅಂದರೆ ಮೊದಲ ಸೋಲು ಕಾಣುವ ಮುನ್ನ ಅತ್ಯಧಿಕ ಟಿ20 ಪಂದ್ಯಗಳನ್ನು ಗೆದ್ದ ನಾಯಕ ಎಂಬ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಈ ಹಿಂದೆ ಹಂಗಾಮಿ ನಾಯಕರಾಗಿ ಕಾಣಿಸಿಕೊಂಡಿದ್ದ ಹಿಟ್ಮ್ಯಾನ್ ಸತತ 4 ಪಂದ್ಯಗಳಲ್ಲಿ ಗೆಲುವಿನ ರುಚಿ ನೋಡಿದ್ದರು. ಇದಾದ ಬಳಿಕ 2018 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಮೊದಲ ಸೋಲನುಭವಿಸಿತ್ತು.
4 / 5
ಇದೀಗ ಸತತ 5 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನಾಯಕನಾಗಿ ಹೊಸ ದಾಖಲೆ ಬರೆದಿದ್ದಾರೆ. ಒಟ್ಟು 6 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನೆಡೆಸಿರುವ ಪಾಂಡ್ಯ ಇದುವರೆಗೆ ಸೋಲಿನ ರುಚಿ ನೋಡಿಲ್ಲ. ಇದರಲ್ಲಿ 5 ಗೆಲುವು ದಾಖಲಿಸಿದರೆ, ಒಂದು ಪಂದ್ಯವು ಮಳೆಯಿಂದ ರದ್ದಾಗಿತ್ತು.
5 / 5
ಶ್ರೀಲಂಕಾ ವಿರುದ್ಧದ ರೋಚಕ ಗೆಲುವಿನೊಂದಿಗೆ ಸತತ 5 ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ಪಾಂಡ್ಯ, ಈ ಹಿಂದೆ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಸತತ 4 ಗೆಲುವು ದಾಖಲಿಸಿದ ಭಾರತೀಯ ನಾಯಕ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭವಿಷ್ಯದ ಭಾರತ ತಂಡದ ಕ್ಯಾಪ್ಟನ್ ಆಗುವತ್ತ ಹಾರ್ದಿಕ್ ಪಾಂಡ್ಯ ದೃಢ ಹೆಜ್ಜೆಯನ್ನಿಟ್ಟಿದ್ದಾರೆ.