ಹಾರ್ದಿಕ್ ಪಾಂಡ್ಯ ಸಿಕ್ಸರ್​ಗೆ ಕೆಳಗೆ ಬಿದ್ದ ವಿರಾಟ್ ಕೊಹ್ಲಿಯ ದಾಖಲೆ

|

Updated on: Oct 07, 2024 | 8:30 AM

India vs Bangladesh, 1st T20I: ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದ್ದು, ದೆಹಲಿಯಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು.

1 / 7
ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗ್ವಾಲಿಯರ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 19.5 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಗಿತ್ತು. 128 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಉತ್ತಮ ಪಡೆದಿರಲಿಲ್ಲ.

2 / 7
ಯುವ ಸ್ಪೋಟಕ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ 16 ರನ್​ಗಳಿಸಿ ರನೌಟ್​ಗೆ ಬಲಿಯಾದರು. ಆ ಬಳಿಕ ಬಂದ ಸೂರ್ಯಕುಮಾರ್ ಯಾದವ್ ಕೇವಲ 14 ಎಸೆತಗಳಲ್ಲಿ 29 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ (29) ಸಹ ಪೆವಿಲಿಯನ್​ನತ್ತ ಮುಖ ಮಾಡಿದರು.

3 / 7
ಈ ಹಂತದಲ್ಲಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅತ್ಯಾಕರ್ಷಕ ಬ್ಯಾಟಿಂಗ್​​ನೊಂದಿಗೆ ಗಮನ ಸೆಳೆದರು. ಬಾಂಗ್ಲಾ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ ಪಾಂಡ್ಯ ಕೇವಲ 16 ಎಸೆತಗಳಲ್ಲಿ 4 ಫೋರ್ ಹಾಗೂ 2 ಭರ್ಜರಿ ಸಿಕ್ಸ್​ನೊಂದಿಗೆ ಅಜೇಯ 39 ರನ್ ಚಚ್ಚಿದರು.

4 / 7
ಅದರಲ್ಲೂ ತಂಡದ ಗೆಲುವಿಗೆ ಕೇವಲ 1 ರನ್​ ಅವಶ್ಯಕತೆಯಿದ್ದಾಗ ತಸ್ಕಿನ್ ಅಹ್ಮದ್ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಸಿಕ್ಸರ್ ಸಿಡಿಸಿ ಪಂದ್ಯವನ್ನು ಅಂತ್ಯಗೊಳಿಸಿದರು. ಇದರೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಪಾಂಡ್ಯ ಪಾಲಾಯಿತು.

5 / 7
ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಸಿಕ್ಸ್ ಸಿಡಿಸಿ ಅತೀ ಹೆಚ್ಚು ಬಾರಿ ಪಂದ್ಯವನ್ನು ಕೊನೆಗೊಳಿಸಿದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಒಟ್ಟು 4 ಬಾರಿ ಸಿಕ್ಸ್ ಬಾರಿಸಿ ಪಂದ್ಯವನ್ನು ಅಂತ್ಯಗೊಳಿಸಿದ್ದರು.

6 / 7
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ. ಬಾಂಗ್ಲಾ ವಿರುದ್ಧ ಸಿಕ್ಸ್​ ಸಿಡಿಸಿ ಪಂದ್ಯವನ್ನು ಅಂತ್ಯಗೊಳಿಸುವುದರೊಂದಿಗೆ, ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸಿಕ್ಸ್ ಬಾರಿಸಿ ಮ್ಯಾಚ್ ಕೊನೆಗೊಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಕುಂಗ್​ಫು ಪಾಂಡ್ಯ ಈವರೆಗೆ 5 ಪಂದ್ಯಗಳನ್ನು ಸಿಕ್ಸ್​ನೊಂದಿಗೆ ಅಂತ್ಯಗೊಳಿಸಿದ್ದಾರೆ.

7 / 7
ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಹಾರ್ದಿಕ್ ಪಾಂಡ್ಯ ಯಶಸ್ವಿಯಾಗಿದ್ದಾರೆ. ಇನ್ನು ಪಾಂಡ್ಯ ಅವರ ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾ 11.5 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 132 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.