- Kannada News Photo gallery Cricket photos Hardik Pandya, Jasprit Bumrah, Pant Unlikely To Play ODI Series Against New Zealand
ಭಾರತ ತಂಡದಿಂದ ಮೂವರು ಆಟಗಾರರು ಔಟ್..!
India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಕೆಲ ಪ್ರಮುಖ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅಲ್ಲದೆ ಈ ಸರಣಿಯ ಮೂಲಕ ಇಶಾನ್ ಕಿಶನ್ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ಎಂದು ವರದಿಯಾಗಿದೆ.
Updated on: Dec 29, 2025 | 8:33 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 8 ಮ್ಯಾಚ್ಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಐದು ಮ್ಯಾಚ್ಗಳ ಟಿ20 ಸರಣಿ ಶುರುವಾಗಲಿದೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಈ ಮೂವರಲ್ಲಿ ಇಬ್ಬರಿಗೆ ವಿಶ್ರಾಂತಿ ನೀಡಲಾಗುತ್ತಿದ್ದರೆ, ಒಬ್ಬರನ್ನು ತಂಡದಿಂದ ಕೈ ಬಿಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿರುವ ಆಟಗಾರರು ಯಾರೆಂದರೆ...

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಮ್ಯಾಚ್ಗಳಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಈ ಸರಣಿ ವೇಳೆ ಬುಮ್ರಾಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.

ಹಾಗೆಯೇ ಭರ್ಜರಿ ಫಾರ್ಮ್ನಲ್ಲಿರುವ ಹಾರ್ದಿಕ್ ಪಾಂಡ್ಯ ಕೂಡ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಫೆಬ್ರವರಿ 7 ರಿಂದ ಟಿ20 ವಿಶ್ವಕಪ್ ಶುರುವಾಗಲಿದ್ದು, ಹೀಗಾಗಿ ಸ್ಟಾರ್ ಆಲ್ರೌಂಡರ್ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.

ಇನ್ನು ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರನ್ನು ಏಕದಿನ ತಂಡದಿಂದ ಕೈ ಬಿಡಲು ಆಯ್ಕೆ ಸಮಿತಿ ಚರ್ಚಿಸಿದೆ. ಅವರ ಬದಲಿಗೆ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲು ಬಯಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಈ ಮೂವರು ಕಿವೀಸ್ ವಿರುದ್ಧದ ಒಡಿಐ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

ನ್ಯೂಝಿಲೆಂಡ್ ಸರಣಿಗೆ ಭಾರತದ ಸಂಭಾವ್ಯ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್.
