- Kannada News Photo gallery Cricket photos Hardik Pandya looked heartbroken after Mumbai Indians defeat to Punjab Kings
ಮುಂಬೈ ಇಂಡಿಯನ್ಸ್ ಸೋಲುತ್ತಿದ್ದಂತೆ ನೋವಿನಿಂದ ಕುಗ್ಗಿ ಹೋದ ಹಾರ್ದಿಕ್ ಪಾಂಡ್ಯ
IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಫೈನಲ್ ಆಡಲಿರುವ ತಂಡಗಳಾವುವು ಎಂಬುದು ನಿರ್ಧಾರವಾಗಿದೆ. ಜೂನ್ 3 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.
Updated on: Jun 02, 2025 | 7:32 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡ ಸೋಲನುಭವಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಪಂಜಾಬ್ ಕಿಂಗ್ಸ್ (PBKS) ತಂಡವು ಫೈನಲ್ಗೆ ಲಗ್ಗೆಯಿಟ್ಟಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ (44) ಹಾಗೂ ತಿಲಕ್ ವರ್ಮಾ (44) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಪ್ರದರ್ಶನದೊಂದಿಗೆ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 203 ರನ್ ಕಲೆಹಾಕಿತು.

ಈ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಶ್ರೇಯಸ್ ಅಯ್ಯರ್ ಏಕಾಂಗಿಯಾಗಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. 47 ಎಸೆತಗಳನ್ನು ಎದುರಿಸಿದ ಅಯ್ಯರ್ 8 ಭರ್ಜರಿ ಸಿಕ್ಸರ್ಗಳೊಂದಿಗೆ ಅಜೇಯ 87 ರನ್ ಬಾರಿಸಿ 19 ಓವರ್ಗಳಲ್ಲಿ ತಂಡವನ್ನು ಗುರಿ ತಲುಪಿಸಿದರು.

ಅತ್ತ 19ನೇ ಓವರ್ನ ಕೊನೆಯ ಎಸೆತದಲ್ಲಿ ಶ್ರೇಯಸ್ ಅಯ್ಯರ್ ಸಿಕ್ಸರ್ ಸಿಡಿಸುತ್ತಿದ್ದಂತೆ ಇತ್ತ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಭಾವುಕರಾಗಿ ಕುಗ್ಗಿ ಹೋದರು. ಅಲ್ಲದೆ ಕೆಲ ಮೈದಾನದಲ್ಲೇ ಕುಳಿತುಕೊಳ್ಳುವ ಮೂಲಕ ತಮ್ಮ ನೋವನ್ನು ಅದುಮಿಟ್ಟುಕೊಳ್ಳುತ್ತಿರುವುದು ಕಂಡು ಬಂತು.

ಈ ವೇಳೆ ಹಾರ್ದಿಕ್ ಪಾಂಡ್ಯ ಅವರನ್ನು ಸಮಾಧಾನಪಡಿಸಲು ಜಸ್ಪ್ರೀತ್ ಬುಮ್ರಾ ಸೇರಿದಂತೆ ಸಹ ಆಟಗಾರರು ಶ್ರಮಿಸಿದರು. ಇದಾಗ್ಯೂ ಭಾವುಕರಾಗಿಯೇ ಕಾಣಿಸಿಕೊಂಡ ಪಾಂಡ್ಯ ಅವರು ಕೆಲ ಹೊತ್ತು ಮೈದಾನದಲ್ಲೇ ಕೂತಿದ್ದರು. ಇದೀಗ ಈ ಭಾವುಕ ಕ್ಷಣಗಳ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
