
ಜನವರಿ 3 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ನೂತನ ಆಯ್ಕೆ ಸಮಿತಿಯು ಟಿ20 ಕ್ರಿಕೆಟ್ಗೆ ರೋಹಿತ್ ಶರ್ಮಾ ಬದಲಿಗೆ ಪಾಂಡ್ಯರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲು ಆಸಕ್ತಿ ಹೊಂದಿದೆ. ಹೀಗಾಗಿ 2023ರ ಮೊದಲ ಸರಣಿಯಲ್ಲೇ ನಾಯಕ ಬದಲಾಗಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸದ್ಯ ಹೆಬ್ಬೆರಳಿನ ಗಾಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಲಭ್ಯರಾಗುವುದು ಅನುಮಾನ. ಹೀಗಾಗಿ ಅವರ ಬದಲಿಗೆ ನಾಯಕರಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲು ಬಿಸಿಸಿಐ ಬಯಸಿದೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಚುಟುಕು ಕ್ರಿಕೆಟ್ನಲ್ಲಿ ಪಾಂಡ್ಯರನ್ನೇ ನಾಯಕರನ್ನಾಗಿ ಮುಂದುವರೆಸಲು ಬಿಸಿಸಿಐ ಚಿಂತಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮತ್ತೊಂದೆಡೆ ಕಳಪೆ ಫಾರ್ಮ್ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಕಳಪೆ ಫಾರ್ಮ್ನಲ್ಲಿರುವ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಕೂಡ ತಂಡದಿಂದ ಹೊರಬೀಳಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕ ಹಾಗೂ ಉಪನಾಯಕ ಬದಲಾಗುವ ಸಾಧ್ಯತೆ ಹೆಚ್ಚಿದೆ.

ಹಾಗೆಯೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ವೇಳೆ ಟೀಮ್ ಇಂಡಿಯಾದ ಹಿರಿಯ ಆಟಗಾರ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇದರಿಂದ ಟೀಮ್ ಇಂಡಿಯಾದಲ್ಲಿ 3 ಬದಲಾವಣೆ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

ಒಟ್ಟಿನಲ್ಲಿ 2024 ರ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಬಿಸಿಸಿಐ ಯುವ ಪಡೆಯನ್ನು ಸಜ್ಜುಗೊಳಿಸುವ ಇರಾದೆಯಲ್ಲಿದೆ. ಹೀಗಾಗಿ ಹಿರಿಯ ಆಟಗಾರರಿಗೆ ಟಿ20 ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಶ್ರೀಲಂಕಾ ವಿರುದ್ಧ ತರುಣರ ಬಳಗವನ್ನು ಕಣಕ್ಕಿಳಿಸಲು ಬಿಸಿಸಿಐ ಭರ್ಜರಿ ಪ್ಲ್ಯಾನ್ ರೂಪಿಸಿದೆ.