ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಬಿದ್ದ ಬಳಿಕ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಅಲ್ಲದೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವ ಕಾರಣ, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಮಾಡಲಾಗಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಸೂರ್ಯನೇ ನಾಯಕರಾಗಿ ಆಯ್ಕೆಯಾಗಿದ್ದಾರೆ.