Hardik Pandya Fitness: ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಯಾವಾಗ? ಬಿಗ್ ಅಪ್​ಡೇಟ್ ನೀಡಿದ ಜಯ್​ ಶಾ

|

Updated on: Dec 10, 2023 | 7:41 AM

Hardik Pandya Fitness: ವಿಶ್ವಕಪ್​ನಲ್ಲಿ ಇಂಜುರಿಗೊಂಡಿದ್ದ ಟೀಂ ಇಂಡಿಯಾದ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ವಾಪಸ್ಸಾತಿಯ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಿಗ್ ಅಪ್​ಡೇಟ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಯ್​ ಶಾ ಮುಂಬರುವ ಟಿ20 ಸರಣಿಯಲ್ಲಿ ಪಾಂಡ್ಯ ತಂಡಕ್ಕೆ ಮರಳಬಹುದು ಎಂದಿದ್ದಾರೆ.

1 / 7
ವಿಶ್ವಕಪ್​ನಲ್ಲಿ ಇಂಜುರಿಗೊಂಡಿದ್ದ ಟೀಂ ಇಂಡಿಯಾದ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ವಾಪಸ್ಸಾತಿಯ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಿಗ್ ಅಪ್​ಡೇಟ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಯ್​ ಶಾ ಮುಂಬರುವ ಟಿ20 ಸರಣಿಯಲ್ಲಿ ಪಾಂಡ್ಯ ತಂಡಕ್ಕೆ ಮರಳಬಹುದು ಎಂದಿದ್ದಾರೆ.

2 / 7
ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಫಿಟ್ ಆಗಬಹುದು ಎಂದು ಜಯ್ ಶಾ ಪಿಟಿಐಗೆ ತಿಳಿಸಿದ್ದಾರೆ.

3 / 7
ಅಫ್ಘಾನಿಸ್ತಾನ ವಿರುದ್ಧ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತದಲ್ಲಿಯೇ ಆಡಬೇಕಿದೆ. ಉಭಯ ದೇಶಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 11, 14 ಮತ್ತು 17 ರಂದು ನಡೆಯಲಿದೆ.

4 / 7
2023 ರ ವಿಶ್ವಕಪ್‌ನಲ್ಲಿ ಪಾಂಡ್ಯ ಗಾಯಗೊಂಡಿದ್ದರು. ಹೀಗಾಗಿ ಅವರು ಇಡೀ ಟೂರ್ನಿಯಿಂದ ಹೊರಗುಳಿಯಬೇಕಾಯಿತು. ಅಂದಿನಿಂದ ಅವರು ತಂಡದಿಂದ ಹೊರಗುಳಿದಿದ್ದಾರೆ. ಡಿಸೆಂಬರ್ 10 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಅವರು ಯಾವುದೇ ತಂಡದ ಬಾಗವಾಗಿಲ್ಲ.

5 / 7
ವಾಸ್ತವವಾಗಿ 2023 ರ ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಲೀಗ್ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಹೀಗಾಗಿ ಅವರು ಪಂದ್ಯದ ಮಧ್ಯದಲ್ಲಿಯೇ ಮೈದಾನವನ್ನು ತೊರೆದು ಹೊರಗೆ ಹೋಗಿದ್ದರು. ಇದಾದ ನಂತರ ಅವರು ಬ್ಯಾಟಿಂಗ್‌ಗೂ ಸಹ ಬಂದಿರಲಿಲ್ಲ.

6 / 7
ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಬಿದ್ದ ಬಳಿಕ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಅಲ್ಲದೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವ ಕಾರಣ, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಮಾಡಲಾಗಿತ್ತು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಸೂರ್ಯನೇ ನಾಯಕರಾಗಿ ಆಯ್ಕೆಯಾಗಿದ್ದಾರೆ.

7 / 7
ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಅವರು ಜನವರಿಯಲ್ಲಿ ನಡೆಯಲ್ಲಿರುವ ಅಫ್ಘಾನಿಸ್ತಾನ ವಿರುದ್ಧದ ತವರಿನ ಸರಣಿಯಲ್ಲಿ ತಂಡಕ್ಕೆ ಮರಳಲಿದ್ದಾರೆ ಎಂದು ವರದಿಗಳಿವೆ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡದ ಏಕೈಕ ಟಿ20 ಸರಣಿ ಇದಾಗಿದೆ.