Hardik Pandya: ಹಾರ್ದಿಕ್ ಪಾಂಡ್ಯರ ಶೇ.70 ರಷ್ಟು ಆಸ್ತಿ ಹೆಂಡತಿ ಪಾಲು..?
TV9 Web | Updated By: ಝಾಹಿರ್ ಯೂಸುಫ್
Updated on:
May 25, 2024 | 12:08 PM
Hardik Pandya-Natasa Stankovic: ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು. 14 ಪಂದ್ಯಗಳಲ್ಲಿ ಮುಂಬೈ ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದ ಪಾಂಡ್ಯ ಕೇವಲ 4 ಮ್ಯಾಚ್ಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿದ್ದರು. ಅಲ್ಲದೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿತ್ತು. ಈ ಅಭಿಯಾನದ ಮುಕ್ತಾಯದ ಬೆನ್ನಲ್ಲೇ ಇದೀಗ ಹಾರ್ದಿಕ್ ಪಾಂಡ್ಯರ ವೈಯುಕ್ತಿಕ ಜೀವನ ಚರ್ಚೆಗೆ ಕಾರಣವಾಗಿದೆ.
1 / 6
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ನತಾಶಾ ಸ್ಟಾಂಕೋವಿಕ್ (Natasa Stankovic) ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ಸುದ್ದಿಗಳನ್ನು ಪುಷ್ಠೀಕರಿಸುವಂತೆ ಇದೀಗ ಇವರಿಬ್ಬರ ನಡುವಣ ಮನಸ್ತಾಪ ಬಹಿರಂಗವಾಗಿದೆ.
2 / 6
ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಯಾವುದೇ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿರಲಿಲ್ಲ.
3 / 6
ಅಷ್ಟೇ ಅಲ್ಲದೆ ಮಾರ್ಚ್ 4 ನತಾಶಾ ಅವರ ಜನ್ಮದಿನ. ಈ ದಿನದಂದು ಹಾರ್ದಿಕ್ ಪಾಂಡ್ಯ ಪತ್ನಿಗೆ ಸೋಷಿಯಲ್ ಮೀಡಿಯಾದಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿ ಹಾರ್ದಿಕ್ ಪಾಂಡ್ಯ ಒಂದೇ ಒಂದು ಪೋಸ್ಟ್ ಹಾಕಿರಲಿಲ್ಲ.
4 / 6
ಅತ್ತ ನತಾಶಾ ಸ್ಟಾಂಕೋವಿಕ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಿಂದ ಪಾಂಡ್ಯ ಉಪನಾಮವನ್ನು ತೆಗೆದು ಹಾಕಿದ್ದಾರೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಜೊತೆಗಿನ ಒಂದೇ ಒಂದು ಫೋಟೋವನ್ನು ಶೇರ್ ಮಾಡಿಲ್ಲ. ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಇಬ್ಬರು ಡೈವೋರ್ಸ್ ಆಗಲಿದ್ದಾರೆ ಎಂದು ವದಂತಿಗಳು ಹರಿದಾಡುತ್ತಿದೆ.
5 / 6
ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ. ಈ ಎಲ್ಲಾ ಕಾರಣಗಳಿಂದಾಗಿ ಪಾಂಡ್ಯ ತಮ್ಮ ಮುಂದಿನ ನಡೆಯ ಬಗ್ಗೆ ಎಲ್ಲೂ ಕೂಡ ಮಾತನಾಡುತ್ತಿಲ್ಲ ಎಂದು ವರದಿಯಾಗಿದೆ.
6 / 6
ಒಟ್ಟಿನಲ್ಲಿ ಜೊತೆಯಾಗಿ ಜೊತೆಯಾಗಿ ಜನುಮದ ಜೋಡಿಯಂತೆ ಕಾಣಿಸಿಕೊಳ್ಳುತ್ತಿದ್ದ ಹಾರ್ದಿಕ್ ಪಾಂಡ್ಯ-ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಬಹಿರಂಗವಾಗಿದೆ. ಈ ಸರಿಯಿಲ್ಲದಿರುವುದನ್ನು ಸರಿಪಡಿಸಿಕೊಂಡು ಈ ಜೋಡಿ ಜೊತೆಯಾಗಿ ಬಾಳುವಂತಾಗಲಿ ಎಂಬುದೇ ಅಭಿಮಾನಿಗಳ ಆಶಯ.