- Kannada News Photo gallery Cricket photos Hardik Pandya Injury Update: Team India Comeback via Domestic Cricket?
ಹಾರ್ದಿಕ್ ಪಾಂಡ್ಯ ಕಂಬ್ಯಾಕ್ಗೆ ದಿನಾಂಕ ನಿಗದಿ
Hardik Pandya Injury Update: ಏಷ್ಯಾಕಪ್‌ನಲ್ಲಿ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಈಗ ಚೇತರಿಸಿಕೊಳ್ಳುತ್ತಿರುವ ಪಾಂಡ್ಯ, ಬೆಂಗಳೂರಿನ ಎನ್‌ಸಿಎನಲ್ಲಿ ತೀವ್ರ ತರಬೇತಿಯಲ್ಲಿದ್ದಾರೆ. ಫಿಟ್‌ನೆಸ್ ಪರೀಕ್ಷೆ ಪಾಸಾದ ನಂತರ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ದೇಶೀಯ ಕ್ರಿಕೆಟ್‌ಗೆ ಮರಳುವ ನಿರೀಕ್ಷೆಯಿದೆ. ದಕ್ಷಿಣ ಆಫ್ರಿಕಾ ಸರಣಿಗೆ ಮುನ್ನ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡುವ ಸಾಧ್ಯತೆ ಇದೆ.
Updated on: Nov 12, 2025 | 10:52 PM

2025 ರ ಏಷ್ಯಾಕಪ್ ಸಮಯದಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅಂದಿನಿಂದ ತಂಡದಿಂದ ಹೊರಗುಳಿದಿದ್ದಾರೆ. ಈ ಗಾಯದಿಂದಾಗಿ ಪಾಂಡ್ಯ, ತಂಡದೊಂದಿಗೆ ಆಸ್ಟ್ರೇಲಿಯಾ ಪ್ರವಾಸಕ್ಕೂ ಹೋಗಲು ಸಾಧ್ಯವಾಗಲಿಲ್ಲ. ಆದರೀಗ ಚೇತರಿಕೆಯ ಹಂತದಲಿರುವ ಹಾರ್ದಿಕ್ ಪಾಂಡ್ಯ ಯಾವಾಗ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ.

2025 ರ ಏಷ್ಯಾಕಪ್‌ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಎಡ ಕ್ವಾಡ್ರೈಸ್ಪ್ಸ್ ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಅವರು ಪಾಕಿಸ್ತಾನ ವಿರುದ್ಧದ ಏಷ್ಯಾಕಪ್ ಫೈನಲ್‌ನಲ್ಲಿ ಆಡಲಾಗಲಿಲ್ಲ. ಗಾಯದಿಂದಾಗಿ ತಂಡದಿಂದ ಹೊರಬಿದ್ದ ನಂತರ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಬಂದಿದ್ದ ಪಾಂಡ್ಯ, ಕಠಿಣ ತರಬೇತಿ ಪಡೆಯುತ್ತಿದ್ದು, ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಪರೀಕ್ಷೆ ಪಾಸಾದ ನಂತರ ದೇಶೀಯ ಕ್ರಿಕೆಟ್‌ಗೆ ಮರಳುತ್ತಾರೆ. ಆ ನಂತರ ಟೀಂ ಇಂಡಿಯಾವನ್ನು ಸೇರುತ್ತಾರೆ ಎಂದು ವರದಿಯಾಗಿದೆ. ಇದರರ್ಥ ಅವರು ನವೆಂಬರ್ 26 ರಂದು ಪ್ರಾರಂಭವಾಗುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬರೋಡಾ ತಂಡದ ಪರ ಆಡುವುದನ್ನು ಕಾಣಬಹುದಾಗಿದೆ.

ವರದಿಗಳ ಪ್ರಕಾರ, ಪಾಂಡ್ಯ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಫಿಟ್‌ನೆಸ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ಸರಿಯಾಗಿ ನಡೆದರೆ, ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಆಡುವುದು ಖಚಿತ. ಅದು ಸಾಧ್ಯವಾಗದಿದ್ದರೆ, ತಂಡದ ಎರಡನೇ ಪಂದ್ಯದಲ್ಲಿ ಪಾಂಡ್ಯ ಆಡುವುದನ್ನು ಕಾಣಬಹುದು.

ನವೆಂಬರ್ 30 ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಆಡಬೇಕಾಗಿದೆ. ಅಂತಹ ಸನ್ನಿವೇಶದಲ್ಲಿ, ಪಾಂಡ್ಯ ಭಾರತೀಯ ತಂಡಕ್ಕೆ ಮರಳುವ ಮೊದಲು ಕನಿಷ್ಠ ಒಂದು ದೇಶೀಯ ಪಂದ್ಯವನ್ನು ಆಡಬಹುದು. ಇದರರ್ಥ ಪಾಂಡ್ಯ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸಾಗಿ ದೇಶಿ ಟೂರ್ನಿಯಲ್ಲಿ ಆಡಲು ಅನುಮತಿ ಪಡೆದರೆ, ಹಾರ್ದಿಕ್ ಪಾಂಡ್ಯ ಯಾವುದೇ ವಿರಾಮವಿಲ್ಲದೆ ಮೈದಾನಕ್ಕೆ ಮರಳುತ್ತಾರೆ.




