ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ
India vs South Africa: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 117 ರನ್ಗಳಿಸಿದರೆ, ಈ ಗುರಿಯನ್ನು ಟೀಮ್ ಇಂಡಿಯಾ 15.5 ಓವರ್ಗಳಲ್ಲಿ ಚೇಸ್ ಮಾಡಿ 7 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸಿದೆ.
Updated on: Dec 15, 2025 | 8:23 AM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರನೇ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವಿನ ನಡುವೆಯೇ ಟೀಮ್ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ವಿಶೇಷ ದಾಖಲೆಯನ್ನು ಸಹ ಬರೆದಿದ್ದಾರೆ.

ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮೂರು ಓವರ್‌ಗಳನ್ನು ಎಸೆದಿದ್ದರು. ಈ ವೇಳೆ 23 ರನ್ ನೀಡುವ ಮೂಲಕ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್ ನೊಂದಿಗೆ ಪಾಂಡ್ಯ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಈ ಮೂಲಕ ಟಿ೨೦ ಇತಿಹಾಸದಲ್ಲೇ ಭಾರತದ ಪರ 100 ವಿಕೆಟ್ ಹಾಗೂ 1000 ರನ್ ಕಲೆಹಾಕಿದ ಮೊದಲ ಆಟಗಾರರ ಎಂಬ ದಾಖಲೆಯನ್ನು ಹಾರ್ದಿಕ್ ಪಾಂಡ್ಯ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈ ಸಾಧನೆ ಮಾಡಿದ ವಿಶ್ವದ 5ನೇ ಆಟಗಾರ ಎನಿಸಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯಗೂ ಮುನ್ನ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಝಿಂಬಾಬ್ವೆಯ ಸಿಕಂದರ್ ರಾಝ, ಮಲೇಷ್ಯಾದ ವೀರನ್ ದೀಪ್ ಸಿಂಗ್ ಈ ಸಾಧನೆ ಮಾಡಿದ್ದರು. ಇದೀಗ ಈ ಸಾಧಕರ ಪಟ್ಟಿಯಲ್ಲಿ ಭಾರತೀಯನಾಗಿ ಪಾಂಡ್ಯ ಕಾಣಿಸಿಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಈವರೆಗೆ 123 ಟಿ೨೦ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 100 ವಿಕೆಟ್ ಹಾಗೂ 1939 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್ ಹಾಗೂ 1000+ ರನ್ ಗಳಿಸಿದ ಭಾರತದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



