AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

India vs South Africa: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 117 ರನ್​ಗಳಿಸಿದರೆ, ಈ ಗುರಿಯನ್ನು ಟೀಮ್ ಇಂಡಿಯಾ 15.5 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 15, 2025 | 8:23 AM

Share
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರನೇ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವಿನ ನಡುವೆಯೇ ಟೀಮ್ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ವಿಶೇಷ ದಾಖಲೆಯನ್ನು ಸಹ ಬರೆದಿದ್ದಾರೆ.

1 / 5
ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮೂರು ಓವರ್‌ಗಳನ್ನು ಎಸೆದಿದ್ದರು. ಈ ವೇಳೆ 23 ರನ್ ನೀಡುವ ಮೂಲಕ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಒಂದು ವಿಕೆಟ್ ನೊಂದಿಗೆ ಪಾಂಡ್ಯ ಟಿ೨೦ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

2 / 5
ಈ ಮೂಲಕ ಟಿ೨೦ ಇತಿಹಾಸದಲ್ಲೇ ಭಾರತದ ಪರ 100 ವಿಕೆಟ್ ಹಾಗೂ 1000 ರನ್ ಕಲೆಹಾಕಿದ ಮೊದಲ ಆಟಗಾರರ ಎಂಬ ದಾಖಲೆಯನ್ನು ಹಾರ್ದಿಕ್ ಪಾಂಡ್ಯ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈ ಸಾಧನೆ ಮಾಡಿದ ವಿಶ್ವದ 5ನೇ ಆಟಗಾರ ಎನಿಸಿಕೊಂಡಿದ್ದಾರೆ.

3 / 5
ಹಾರ್ದಿಕ್ ಪಾಂಡ್ಯಗೂ ಮುನ್ನ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಝಿಂಬಾಬ್ವೆಯ ಸಿಕಂದರ್ ರಾಝ, ಮಲೇಷ್ಯಾದ ವೀರನ್ ದೀಪ್ ಸಿಂಗ್ ಈ ಸಾಧನೆ ಮಾಡಿದ್ದರು. ಇದೀಗ ಈ ಸಾಧಕರ ಪಟ್ಟಿಯಲ್ಲಿ ಭಾರತೀಯನಾಗಿ ಪಾಂಡ್ಯ ಕಾಣಿಸಿಕೊಂಡಿದ್ದಾರೆ.

4 / 5
ಹಾರ್ದಿಕ್ ಪಾಂಡ್ಯ ಈವರೆಗೆ 123 ಟಿ೨೦ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 100 ವಿಕೆಟ್ ಹಾಗೂ 1939 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್ ಹಾಗೂ 1000+ ರನ್ ಗಳಿಸಿದ ಭಾರತದ  ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ.

5 / 5