Hardik Pandya Injury: ಟೀಮ್ ಇಂಡಿಯಾಕ್ಕೆ ಮತ್ತೊಂದು ಆಘಾತ: ಗಿಲ್ ಬಳಿಕ ಮತ್ತೊಬ್ಬ ಆಟಗಾರ ಹೊರಕ್ಕೆ?

|

Updated on: Oct 07, 2023 | 9:38 AM

India vs Australia, ICC World Cup 2023: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕಣಕ್ಕಿಳಿಯುವ ಮುನ್ನವೇ ಮತ್ತೊಂದು ಆಘಾತ ಉಂಟಾಗಿದೆ. ಈಗಾಗಲೇ ತೀವ್ರ ಜ್ವರದಿಂದ ಬಳಲುತ್ತಿರುವ ಸ್ಟಾರ್ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡಿದ್ದಾರೆ ಎಂದು ವರದಿಗಳಿವೆ.

1 / 7
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತನ್ನ ಅಭಿಯಾನವನ್ನು ಭಾನುವಾರ (ಅಕ್ಟೋಬರ್ 8) ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ಪ್ರಾರಂಭಿಸಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ.

2 / 7
ಈಗಾಗಲೇ ತೀವ್ರ ಜ್ವರದಿಂದ ಬಳಲುತ್ತಿರುವ ಸ್ಟಾರ್ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇವರು ಆಡುವುದಿಲ್ಲ. ಇವರಿಗೆ ಡೆಂಗ್ಯೂ ಸೋಂಕು ದೃಢವಾಗಿದ್ದು, 7-10 ದಿನಗಳ ಕಾಲ ಯಾವುದೇ ಪಂದ್ಯಕ್ಕೆ ಲಭ್ಯ ಇರುವುದಿಲ್ಲ ಎಂದು ವರದಿಗಳಿವೆ.

3 / 7
ಗಿಲ್ ಅನುಪಸ್ಥಿತಿಯ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ದೊಡ್ಡ ಆಘಾತ ಉಂಟಾಗಿದೆ. ತಂಡದ ಅಭ್ಯಾಸದ ಅವಧಿಯಲ್ಲಿ ಸ್ಟಾರ್ ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಗಾಯಗೊಂಡಿದ್ದಾರೆ ಎಂದು ವರದಿಗಳಿವೆ. RevSportz ವರದಿಯ ಪ್ರಕಾರ, ಪಾಂಡ್ಯ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಬೆರಳಿಗೆ ಪೆಟ್ಟಾಗಿದೆ.

4 / 7
ಹಾರ್ದಿಕ್ ಪಾಂಡ್ಯ ಅವರ ಗಾಯದ ಪ್ರಮಾಣ ಎಷ್ಟು ಎಂಬುದು ತಿಳಿದುಬಂದಿಲ್ಲ. ಆದರೆ, ಅವರು ಇಂಜುರಿಗೆ ತುತ್ತಾದ ಬಳಿಕ ಬ್ಯಾಟಿಂಗ್ ಮಾಡಲಿಲ್ಲ. ಅಭ್ಯಾಸದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ. ಇವರು ನಾಳಿನ ಪಂದ್ಯಕ್ಕೆ ಲಭ್ಯರಿರುತ್ತಾರ ಎಂಬ ಬಗ್ಗೆ ಕೂಡ ಖಚಿತ ಮಾಹಿತಿಯಿಲ್ಲ.

5 / 7
ಹಾರ್ದಿಕ್ ವೈಟ್-ಬಾಲ್ ಸ್ವರೂಪದಲ್ಲಿ ಟೀಮ್ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದಾರೆ. ನಂ. 6 ರಲ್ಲಿ, ಅವರು ಫಿನಿಶರ್ ಪಾತ್ರವನ್ನು ವಹಿಸುತ್ತಾರೆ ಮತ್ತು ಮಧ್ಯಮ ಓವರ್‌ಗಳಲ್ಲಿ ಟೀಮ್ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ ಕೂಡ ಆಗಿದ್ದಾರೆ.

6 / 7
ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾಕಪ್ 2023 ರ ಫೈನಲ್‌ನಲ್ಲಿ ಹಾರ್ದಿಕ್ ಕೊನೆಯ ಬಾರಿಗೆ ಭಾರತ ಪರ ಕಣಕ್ಕಿಳಿದಿದ್ದರು. ಆ ಪಂದ್ಯದಲ್ಲಿ ಎಸೆದ 2.2 ಓವರ್‌ಗಳಲ್ಲಿ ಮೂರು ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು.

7 / 7
ಶುಭ್​ಮನ್ ಗಿಲ್ ಆಡದಿರುವ ಕಾರಣ ಅವರ ಜಾಗದಲ್ಲಿ ರೋಹಿತ್ ಶರ್ಮಾ ಜೊತೆ ಓಪನರ್ ಆಗಿ ಇಶಾನ್ ಕಿಶನ್ ಆಡಲಿದ್ದಾರೆ. ಆದರೆ, ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಯಾರಿಗೆ ಸ್ಥಾನ ಎಂಬುದು ಕುತೂಹಲ ಕೆರಳಿಸಿದೆ. ಅಶ್ವಿನ್ ಆಡಲಿರುವ ಕಾರಣ ಶಾರ್ದೂಲ್ ಥಾಕೂರ್ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು. ಎಲ್ಲಾದರು ಪಾಂಡ್ಯ ಗುಣಮುಖರಾಗದಿದ್ದರೆ ಥಾಕೂರ್ ಕಣಕ್ಕಿಳಿಯುವ ಸಾಧ್ಯತೆ ಇದೆ.

Published On - 9:33 am, Sat, 7 October 23