ಟೀಮ್ ಇಂಡಿಯಾ ಟಿ20 ತಂಡದ ನೂತನ ನಾಯಕ ಯಾರು?

Updated on: Jul 17, 2024 | 9:43 AM

Rohit Sharma: ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಭಾರತ ಟಿ20 ತಂಡದ ನಾಯಕರಾಗಿ ಕಾಣಿಸಿಕೊಳ್ಳುವುದು ಯಾರು? ಎಂಬುದೇ ಕುತೂಹಲ. ಒಂದೆಡೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಉಪನಾಯಕರಾಗಿ ಕಾಣಿಸಿಕೊಂಡಿದ್ದ ಪಾಂಡ್ಯ ಇದ್ದರೆ, ಮತ್ತೊಂದೆಡೆ ಸೂರ್ಯಕುಮಾರ್ ಯಾದವ್ ಹೆಸರು ಕಾಣಿಸಿಕೊಂಡಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರಿಗೆ ಭಾರತ ಟಿ20 ತಂಡದ ನಾಯಕತ್ವ ಒಲಿಯಲಿದೆ.

1 / 5
ಭಾರತ ಟಿ20 ತಂಡದ ನೂತನ ನಾಯಕನ ರೇಸ್​ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ. ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

ಭಾರತ ಟಿ20 ತಂಡದ ನೂತನ ನಾಯಕನ ರೇಸ್​ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ. ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

2 / 5

ಅದರಂತೆ ಇದೀಗ ಭಾರತ ಟಿ20 ತಂಡದ ನಾಯಕರುಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಹೆಸರುಗಳು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಭಾರತ ಟಿ20 ತಂಡದ ಖಾಯಂ ನಾಯಕನಾಗಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

3 / 5

ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಜೊತೆ ಜಸ್​ಪ್ರೀತ್ ಬುಮ್ರಾ, ರಿಷಭ್ ಪಂತ್, ಸೂರ್ಯಕುಮಾರ್ ಹೆಸರುಗಳು ನಾಯಕತ್ವದ ರೇಸ್​ನಲ್ಲಿ ಕೇಳಿ ಬಂದಿತ್ತು. ಇದೀಗ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಹೆಸರುಗಳು ಮಾತ್ರ ಮುಂಚೂಣಿಯಲ್ಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಅಥವಾ ಪಾಂಡ್ಯ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 5

ಏಕದಿನ ಮತ್ತು ಟೆಸ್ಟ್ ತಂಡದ ನಾಯಕರಾಗಿ ಮುಂದಿನ ವರ್ಷದವರೆಗೆ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಟಿ20 ತಂಡದ ನಾಯಕ ಮಾತ್ರ ಬದಲಾಗಲಿದ್ದಾರೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ನಾಯಕರಾಗುವುದು ಖಚಿತ ಎನ್ನಲಾಗಿತ್ತು. ಆದರೀಗ ಸೂರ್ಯಕುಮಾರ್ ಹೆಸರು ಮುಂಚೂಣಿಗೆ ಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.

5 / 5

ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು 16 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 10 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿತ್ತು. ಹಾಗೆಯೇ ಸೂರ್ಯಕುಮಾರ್ ಯಾದವ್ 7 ಮ್ಯಾಚ್​ಗಳಲ್ಲಿ ಭಾರತ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಟೀಮ್ ಇಂಡಿಯಾ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಇವರಿಬ್ಬರಲ್ಲಿ ಯಾರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಿದ್ದಾರೆ ಕಾದು ನೋಡಬೇಕಿದೆ.

Published On - 2:27 pm, Tue, 16 July 24

Loading...
Unable to load recommendations.
Follow Us