ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸೈಮ್ ಅಯ್ಯೂಬ್ (98) ಅರ್ಧಶತಕ ಬಾರಿಸಿದರೆ, ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದ ಇರ್ಫಾನ್ ಖಾನ್ 30 ರನ್ ಚಚ್ಚಿದರು. ಪರಿಣಾಮ 20 ಓವರ್ಗಳಲ್ಲಿ ಪಾಕ್ ತಂಡದ ಸ್ಕೋರ್ 5 ವಿಕೆಟ್ ನಷ್ಟಕ್ಕೆ 206 ಕ್ಕೆ ಬಂದು ನಿಂತಿತು.