1642 ಎಸೆತಗಳಲ್ಲಿ ಭರ್ಜರಿ ದಾಖಲೆ ಬರೆದ ಹ್ಯಾರಿಸ್ ರೌಫ್
Zimbabwe vs Pakistan, 1st T20I: ಝಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 57 ರನ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ 165 ರನ್ ಕಲೆಹಾಕಿದರೆ, ಝಿಂಬಾಬ್ವೆ 108 ರನ್ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿದೆ.
1 / 6
ಪಾಕಿಸ್ತಾನ್ ತಂಡದ ವೇಗಿ ಹ್ಯಾರಿಸ್ ರೌಫ್ ಹೊಸ ದಾಖಲೆ ಬರೆದಿದ್ದಾರೆ. ಬುಲವಾಯೊದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ರೌಫ್ 3 ಓವರ್ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.
2 / 6
ಈ ಮೂರು ವಿಕೆಟ್ಗಳೊಂದಿಗೆ ಪಾಕಿಸ್ತಾನ್ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಶಾದಾಬ್ ಖಾನ್ ಹೆಸರಿನಲ್ಲಿತ್ತು. ಇದೀಗ ಈ ದಾಖಲೆ ಮುರಿಯುವಲ್ಲಿ ರೌಫ್ ಯಶಸ್ವಿಯಾಗಿದ್ದಾರೆ.
3 / 6
ಪಾಕಿಸ್ತಾನ್ ಪರ 104 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಶಾದಾಬ್ ಖಾನ್ 96 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 2089 ಎಸೆತಗಳನ್ನು ಎಸೆದಿರುವ ಅವರು ಒಟ್ಟು 107 ವಿಕೆಟ್ ಕಬಳಿಸಿದ್ದರು. ಈ ಮೂಲಕ ಪಾಕ್ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.
4 / 6
ಇದೀಗ ಶಾದಾಬ್ ಖಾನ್ರನ್ನು ಹಿಂದಿಕ್ಕಿ ಹ್ಯಾರಿಸ್ ರೌಫ್ ಅಗ್ರಸ್ಥಾನಕ್ಕೇರಿದ್ದಾರೆ. ಪಾಕ್ ಪರ 74 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ರೌಫ್ 1642 ಎಸೆತಗಳಲ್ಲಿ 109 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನ ಪಾಕ್ ತಂಡದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.
5 / 6
ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ನ್ಯೂಝಿಲೆಂಡ್ನ ಟಿಮ್ ಸೌಥಿ ಹೆಸರಿನಲ್ಲಿದೆ. ಕಿವೀಸ್ ಪರ 123 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಸೌಥಿ 2753 ಎಸೆತಗಳಲ್ಲಿ 164 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದಾರೆ.
6 / 6
ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಇರುವುದು ಯುಜ್ವೇಂದ್ರ ಚಹಲ್ ಹೆಸರಿನಲ್ಲಿ. 79 ಇನಿಂಗ್ಸ್ಗಳಲ್ಲಿ 1764 ಎಸೆತಗಳನ್ನು ಎಸೆದಿರುವ ಚಹಲ್ ಒಟ್ಟು 96 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದಾರೆ.