2016 ರಲ್ಲಿ ಟೀಂ ಇಂಡಿಯಾ ಹಾಲಿ ನಾಯಕ ರೋಹಿತ್ ಶರ್ಮಾ, ಆಸ್ಟ್ರೇಲಿಯಾದಲ್ಲಿ ಈ ಪ್ರಶಸ್ತಿಯನ್ನು ಗೆದ್ದಿದ್ದರು. ಇದೀಗ ರೌಫ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಡೀ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ರೌಫ್, ಮೆಲ್ಬೋರ್ನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 67 ರನ್‌ಗಳಿಗೆ 3 ವಿಕೆಟ್ ಪಡೆದರೆ, ಎರಡನೇ ಪಂದ್ಯದಲ್ಲಿ 29 ರನ್ ಬಿಟ್ಟುಕೊಟ್ಟು ಐದು ವಿಕೆಟ್, ಮೂರನೇ ಏಕದಿನ ಪಂದ್ಯದಲ್ಲಿ 24 ರನ್‌ಗಳಿಗೆ ಎರಡು ವಿಕೆಟ್ ಪಡೆದರು.