AUS vs PAK: ಆಸೀಸ್ ವಿರುದ್ಧ ಶ್ರೇಷ್ಠ ಪ್ರದರ್ಶನ; ಧೋನಿ, ರೋಹಿತ್ ಕ್ಲಬ್ ಸೇರಿದ ಪಾಕ್ ವೇಗಿ

Updated on: Nov 10, 2024 | 4:51 PM

AUS vs PAK: ಪಾಕಿಸ್ತಾನ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದಿದೆ. ವೇಗಿ ಹ್ಯಾರಿಸ್ ರೌಫ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನದ ಪಾಕ್ ಗೆಲುವಿಗೆ ಪ್ರಮುಖ ಕಾರಣವಾಯಿತು. ರೌಫ್, ಇಡೀ ಸರಣಿಯಲ್ಲಿ 10 ವಿಕೆಟ್ ಪಡೆದು ಸರಣಿ ಶ್ರೇಷ್ಠರಾಗಿ ಆಯ್ಕೆಯಾದರು. ಈ ಮೂಲಕ ರೌಫ್, ಧೋನಿ ಮತ್ತು ರೋಹಿತ್ ಶರ್ಮಾ ಅವರ ವಿಶೇಷ ಕ್ಲಬ್ ಸೇರಿದರು.

1 / 5
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ 2-1 ಅಂತರದಿಂದ ಗೆದ್ದುಕೊಂಡಿದೆ. ಪರ್ತ್‌ನಲ್ಲಿ ಭಾನುವಾರ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ 8 ವಿಕೆಟ್‌ಗಳಿಂದ ಕಾಂಗರೂಗಳನ್ನು ಸೋಲಿಸಿತು. ಪಾಕ್ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ವೇಗಿ ಹ್ಯಾರಿಸ್ ರೌಫ್ ಅವರು ಪ್ರಮುಖ ಪಾತ್ರವಹಿಸಿದರು. ಆಡಿದ ಮೂರು ಪಂದ್ಯಗಳಲ್ಲಿ ಒಟ್ಟು 10 ವಿಕೆಟ್ ಪಡೆಯುವ ಮೂಲಕ ಸರಣಿ ಶ್ರೇಷ್ಠರಾಗಿ ಆಯ್ಕೆಯಾದರು.

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ 2-1 ಅಂತರದಿಂದ ಗೆದ್ದುಕೊಂಡಿದೆ. ಪರ್ತ್‌ನಲ್ಲಿ ಭಾನುವಾರ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ 8 ವಿಕೆಟ್‌ಗಳಿಂದ ಕಾಂಗರೂಗಳನ್ನು ಸೋಲಿಸಿತು. ಪಾಕ್ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ವೇಗಿ ಹ್ಯಾರಿಸ್ ರೌಫ್ ಅವರು ಪ್ರಮುಖ ಪಾತ್ರವಹಿಸಿದರು. ಆಡಿದ ಮೂರು ಪಂದ್ಯಗಳಲ್ಲಿ ಒಟ್ಟು 10 ವಿಕೆಟ್ ಪಡೆಯುವ ಮೂಲಕ ಸರಣಿ ಶ್ರೇಷ್ಠರಾಗಿ ಆಯ್ಕೆಯಾದರು.

2 / 5

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಮತ್ತು ಮೂರನೇ ಏಕದಿನ ಪಂದ್ಯದಲ್ಲಿ ಮಾರಕ ದಾಳಿ ನಡೆಸಿದ್ದ ರೌಫ್, ಈ ಎರಡೂ ಪಂದ್ಯಗಳಲ್ಲಿ ಪಂದ್ಯದ ಆಟಗಾರನಾಗಿ ಆಯ್ಕೆಯಾಗಿದ್ದು ಮಾತ್ರವಲ್ಲದೆ ಸರಣಿಯ ಆಟಗಾರ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಈ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ರೌಫ್, ಭಾರತದ ಮಾಜಿ ನಾಯಕ ಎಂಎಸ್ ಧೋನಿ ಮತ್ತು ರೋಹಿತ್ ಶರ್ಮಾ ಅವರ ವಿಶೇಷ ಕ್ಲಬ್‌ಗೆ ಸೇರ್ಪಡೆಗೊಂಡರು.

3 / 5

ವಾಸ್ತವವಾಗಿ, ರೌಫ್ ಕಳೆದ 10 ವರ್ಷಗಳಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನ ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಐದನೇ ಅತಿಥಿ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ರೌಫ್​ಗೂ ಮುನ್ನ ಭಾರತದ ಮಾಜಿ ನಾಯಕ ಧೋನಿ 2019 ರಲ್ಲಿ ಇಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರೆ, ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ಮತ್ತು ಇಂಗ್ಲೆಂಡ್‌ನ ಜೋ ರೂಟ್ 2018 ರಲ್ಲಿ ಈ ಪ್ರಶಸ್ತಿಗೆ ಭಾಜನರಾಗಿದ್ದರು.

4 / 5

2016 ರಲ್ಲಿ ಟೀಂ ಇಂಡಿಯಾ ಹಾಲಿ ನಾಯಕ ರೋಹಿತ್ ಶರ್ಮಾ, ಆಸ್ಟ್ರೇಲಿಯಾದಲ್ಲಿ ಈ ಪ್ರಶಸ್ತಿಯನ್ನು ಗೆದ್ದಿದ್ದರು. ಇದೀಗ ರೌಫ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಡೀ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ರೌಫ್, ಮೆಲ್ಬೋರ್ನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 67 ರನ್‌ಗಳಿಗೆ 3 ವಿಕೆಟ್ ಪಡೆದರೆ, ಎರಡನೇ ಪಂದ್ಯದಲ್ಲಿ 29 ರನ್ ಬಿಟ್ಟುಕೊಟ್ಟು ಐದು ವಿಕೆಟ್, ಮೂರನೇ ಏಕದಿನ ಪಂದ್ಯದಲ್ಲಿ 24 ರನ್‌ಗಳಿಗೆ ಎರಡು ವಿಕೆಟ್ ಪಡೆದರು.

5 / 5

ಇನ್ನು ಸರಣಿ ಪ್ರಶಸ್ತಿ ಗೆದ್ದ ನಂತರ ಮಾತನಾಡಿದ ರೌಫ್, ಕಳೆದ ಕೆಲವು ತಿಂಗಳುಗಳಿಂದ ನಾವು ಕಷ್ಟಪಡುತ್ತಿದ್ದೆವು. ಇದೀಗ ಈ ಸರಣಿಯ ಗೆಲುವು ಪಾಕಿಸ್ತಾನ ಮತ್ತು ತಂಡಕ್ಕೆ ಬಹಳ ಮಹತ್ವದ್ದಾಗಿತ್ತು. ನಮ್ಮನ್ನು ಬೆಂಬಲಿಸಲು ಇಲ್ಲಿಗೆ ಬಂದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ಪ್ರಪಂಚದಾದ್ಯಂತ ನಮ್ಮನ್ನು ಬೆಂಬಲಿಸುವ ಎಲ್ಲರಿಗೂ ಧನ್ಯವಾದಗಳು ಎಂದರು.

Loading...
Unable to load recommendations.
Follow Us