- TV9 Kannada Photo gallery Cricket photos India Women's Cricket Gold at 2026 Asian Games: Harmanpreet Kaur Gets ₹1 Cr Reward
ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ 1 ಕೋಟಿ ರೂ. ಬಹುಮಾನ
2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಚಿನ್ನ ಗೆದ್ದಿದೆ. ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ಪಂಜಾಬ್ ಸಿಎಂ 1 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಈ ಸಾಧನೆಗೆ ತಂಡ ಅಭಿನಂದಿತವಾಗಿದ್ದರೂ, ಹರ್ಮನ್‌ಪ್ರೀತ್ ಅವರ ವೈಯಕ್ತಿಕ ಬ್ಯಾಟಿಂಗ್ ಪ್ರದರ್ಶನವು ಪ್ರಶ್ನಾರ್ಹವಾಗಿದೆ. ಶ್ರೀಲಂಕಾ ವಿರುದ್ಧ 147 ರನ್‌ಗಳ ಗೆಲುವು ಭಾರತಕ್ಕೆ ಸತತ ಎರಡನೇ ಏಷ್ಯನ್ ಗೇಮ್ಸ್ ಚಿನ್ನ ತಂದುಕೊಟ್ಟಿದೆ.
Updated on: Sep 23, 2026 | 3:42 PM

2026 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಗೆದ್ದುಕೊಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ 1 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಹರ್ಮನ್‌ಪ್ರೀತ್ ಕೌರ್ಗೂ ಮೊದಲು ತಮಿಳುನಾಡಿನ ಜಿ. ಕಮಲಿನಿ ಅವರಿಗೂ ಸಿಎಂ ವಿಜಯ್ 75 ಲಕ್ಷ ರೂ. ಬಹುಮಾನ ಘೋಷಿಸಿದ್ದರು(PC-PTI).

ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿರುವ ಮುಖ್ಯಮಂತ್ರಿ ಭಗವಂತ್ ಮಾನ್, ‘ತಂಡದ ಈ ಸಾಧನೆಯು ಪಂಜಾಬ್ ಮತ್ತು ಇಡೀ ದೇಶದ ಹೆಮ್ಮೆಯನ್ನು ಹೆಚ್ಚಿಸಿದೆ. ಪಂಜಾಬ್‌ನ ಮಗಳು ಹರ್ಮನ್‌ಪ್ರೀತ್ ಕೌರ್ ಬಗ್ಗೆ ನಮಗೆಲ್ಲರಿಗೂ ತುಂಬಾ ಹೆಮ್ಮೆ ಇದೆ’ ಎಂದಿದ್ದಾರೆ. ಅಲ್ಲದೆ ಈ ಸಾಧನೆಗಾಗಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ಇಡೀ ತಂಡವನ್ನು ಅವರು ಅಭಿನಂದಿಸಿದ್ದಾರೆ(PC-PTI).

ಆದಾಗ್ಯೂ ಹರ್ಮನ್‌ಪ್ರೀತ್ ನಾಯಕಿಯಾಗಿ ಯಶಸ್ವಿಯಾದರೂ, ಆಟಗಾರ್ತಿಯಾಗಿ ಸಂಪೂರ್ಣವಾಗಿ ವಿಫಲವಾದರು. ಈ ಪಂದ್ಯಾವಳಿಯಲ್ಲಿ ಮಾತ್ರವಲ್ಲದೆ ಕಳೆದ ಎರಡು ಪಂದ್ಯಾವಳಿಗಳಲ್ಲಿಯೂ ಅವರ ಪ್ರದರ್ಶನ ಅಷ್ಟಕಷ್ಟೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಹರ್ಮನ್‌ಪ್ರೀತ್ 17 ಎಸೆತಗಳಲ್ಲಿ 19 ರನ್ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 33 ಎಸೆತಗಳಲ್ಲಿ ಕೇವಲ 40 ರನ್ ಗಳಿಸಿದರು. ಇದರ ಜೊತೆಗೆ ಅವರ ಸ್ಟ್ರೈಕ್ ರೇಟ್ ವಿಚಾರದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ(PC-PTI).

2026 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಚಿನ್ನದ ಪದಕ ಗೆದ್ದುಕೊಂಡಿತು. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡವು ಅಂತಿಮ ಪಂದ್ಯದಲ್ಲಿ ಶ್ರೀಲಂಕಾವನ್ನು 147 ರನ್‌ಗಳಿಂದ ಸೋಲಿಸುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿತು(PC-PTI).

ಈ ಗೆಲುವಿನೊಂದಿಗೆ ಭಾರತ ಮಹಿಳಾ ಪಡೆ ಏಷ್ಯನ್ ಕ್ರೀಡಾಕೂಟದಲ್ಲಿ ಸತತ ಎರಡನೇ ಬಾರಿಗೆ ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಇದಕ್ಕೂ ಮೊದಲು, 2023 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ತಂಡ ಇದೇ ಶ್ರೀಲಂಕಾವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು(PC-PTI).

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



