
ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬಿದ್ದಿದೆ. ಹರ್ಮನ್ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ವಿರುದ್ಧ ಎಂಐ (DC vs MI) 7 ವಿಕೆಟ್ಗಳಿಂದ ಗೆದ್ದು ಬೀಗಿತು.

ಕೊನೆಯ ಓವರ್ ವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಅಂತಿಮವಾಗಿ ಮುಂಬೈ ಗೆಲುವಿನ ನಗೆ ಬೀರಿತು. ನ್ಯಾಟ್ ಸೀವರ್ ಬ್ರಂಟ್ (Nat Sciver-Brunt) ಸಮಯೋಚಿತ ಆಟ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿತು. ಇದಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು.

ಟ್ರೋಫಿ ಜೊತೆ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್.

ಟ್ರೋಫಿ ಎತ್ತಿ ಸಂಭ್ರಮಿಸುತ್ತಿರುವ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಆಟಗಾರ್ತಿಯರು.

ಚಾಂಪಿಯರ್ ಆದ ಮುಂಬೈ ಇಂಡಿಯನ್ಸ್ ಮಹಿಳಾ ತಂಡಕ್ಕೆ ಟ್ರೋಫಿ ಹಾಗೂ 6 ಕೋಟಿ ರೂ. ನೀಡಲಾಯಿತು.

ರನ್ನರ್-ಅಪ್ ಆದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ 3 ಕೋಟಿ ರೂ. ಬಹುಮಾನ ನೀಡಲಾಯಿತು.
Published On - 8:23 am, Mon, 27 March 23