AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಕ ಸೆಂಚುರಿಯೊಂದಿಗೆ ದಾಖಲೆಗಳ ಮೇಲೆ ದಾಖಲೆ ಬರೆದ ಹರ್ಮನ್​ಪ್ರೀತ್ ಕೌರ್

England Women vs India Women: ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳಾ ತಂಡದ ಪರ ನಾಯಕಿ ಹರ್ಮನ್​ಪ್ರೀತ್ ಕೌರ್ ಭರ್ಜರಿ ಸೆಂಚುರಿ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 318 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 305 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 13 ರನ್​ಗಳ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Jul 23, 2025 | 9:23 AM

Share
ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಚೆಸ್ಟರ್-ಲೆ-ಸ್ಟ್ರೀಟ್​ನ ರಿವರ್​ಸೈಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಹರ್ಮನ್​ಪ್ರೀತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು.

1 / 5
ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಹರ್ಮನ್​ಪ್ರೀತ್ ಕೌರ್ ಮೈದಾನದ ಮೂಲೆ ಮೂಲೆಗೂ ಫೋರ್​ಗಳನ್ನು ಬಾರಿಸಿದರು. ಈ ಮೂಲಕ ಕೇವಲ 82 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಹರ್ಮನ್​ಪ್ರೀತ್ ಏಕದಿನ ಕ್ರಿಕೆಟ್​ನಲ್ಲಿ 4000 ಸಾವಿರ ರನ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಿಥಾಲಿ ರಾಜ್ ಹಾಗೂ ಸ್ಮೃತಿ ಮಂಧಾನ ಈ ಸಾಧನೆ ಮಾಡಿದ್ದರು.

2 / 5
ಅಲ್ಲದೆ ಈ ಶತಕದೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಇಂಗ್ಲೆಂಡ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೆಗ್ ಲ್ಯಾನಿಂಗ್ ಹಾಗೂ ಭಾರತದ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರು. ಈ ಇಬ್ಬರು ಆಂಗ್ಲರ ನಾಡಿನಲ್ಲಿ ತಲಾ 2 ಏಕದಿನ ಶತಕ ಸಿಡಿಸಿದ್ದರು. ಇದೀಗ ಮೂರನೇ ಶತಕದೊಂದಿಗೆ ಹರ್ಮನ್​ಪ್ರೀತ್ ಕೌರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 5
ಹಾಗೆಯೇ ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ 90 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅತ್ಯಧಿಕ ಶತಕ ಸಿಡಿಸಿ ಮಹಿಳಾ ಆಟಗಾರ್ತಿ ಎಂಬ ದಾಖಲೆ ಸಹ ಹರ್ಮನ್​​ಪ್ರೀತ್ ಕೌರ್ ಪಾಲಾಗಿದೆ. 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೇವಲ 85 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ 82 ಎಸೆತಗಳಲ್ಲಿ ಶತಕ ಪೂರೈಸಿ ಈ ವಿಶೇಷ ದಾಖಲೆ ಬರೆದಿದ್ದಾರೆ.

4 / 5
ಹಾಗೆಯೇ ಇಂಗ್ಲೆಂಡ್​ನಲ್ಲಿ ಏಕದಿನ ಕ್ರಿಕೆಟ್​ನಲ್ಲಿ 1000 ರನ್ ಕಲೆಹಾಕಿದ ಟೀಮ್ ಇಂಡಿಯಾದ 2ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಹರ್ಮನ್​ಪ್ರೀತ್ ಕೌರ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಿಥಾಲಿ ರಾಜ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧ 84 ಎಸೆತಗಳಲ್ಲಿ 14 ಫೋರ್​ಗಳೊಂದಿಗೆ 102 ರನ್ ಬಾರಿಸುವ ಮೂಲಕ ಹರ್ಮನ್​ಪ್ರೀತ್ ಕೌರ್ ಕೂಡ ಆಂಗ್ಲರ ನಾಡಿನಲ್ಲಿ 1000 ರನ್ ಪೂರೈಸಿದ್ದಾರೆ.

5 / 5