AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ವಿರುದ್ಧ ಮೊದಲ ಪಂದ್ಯ ಸೋತ ಭಾರತಕ್ಕೆ ಚಾಂಪಿಯನ್ ಪಟ್ಟ..!

Women's T20 World Cup 2026: 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ವನಿತಾ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ ಸೋಲನುಭವಿಸಿದೆ. ಇದು ಸೆಮಿಫೈನಲ್ ಲೆಕ್ಕಾಚಾರವನ್ನು ಕಠಿಣಗೊಳಿಸಿದೆ. ಆದರೆ, ಹಿಂದಿನ ಎರಡು ವಿಶ್ವಕಪ್‌ಗಳಲ್ಲಿಯೂ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಸೋತು ನಂತರ ಚಾಂಪಿಯನ್‌ ಪಟ್ಟ ಗೆದ್ದಿತ್ತು. ಈ ಬಾರಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ತಂಡಕ್ಕೂ ಇದು ಶುಭ ಸೂಚಕವಾಗಿ, ವಿಶ್ವಕಪ್ ಟ್ರೋಫಿ ಗೆಲ್ಲುವ ಆಶಾವಾದ ಮೂಡಿಸಿದೆ.

ಪೃಥ್ವಿಶಂಕರ
|

Updated on: Jun 22, 2026 | 3:54 PM

Share
2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ನತ್ತ ಹೆಜ್ಜೆ ಇಟ್ಟಿದ್ದ ಭಾರತ ವನಿತಾ ಪಡೆ, ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲುವ ಪಂದ್ಯವನ್ನು ಸೋತು ಸಂಕಷ್ಟಕ್ಕೆ ಸಿಲಿಕಿದೆ. ಟೂರ್ನಿಯಲ್ಲಿ ಉಭಯ ತಂಡಗಳ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಈ ಏಕೈಕ ಸೋಲು ಭಾರತದ ಸೆಮಿಫೈನಲ್ ಲೆಕ್ಕಾಚಾರವನ್ನು ಬುಡಮೇಲು ಮಾಡಿದೆ (PC- BCCI X).

1 / 5
ಆದರೆ ಕಳೆದ ಎರಡು ವಿಶ್ವಕಪ್​ಗಳನ್ನು ನೋಡಿದರೆ, ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಸೋತಿದ್ದು, ಚಾಂಪಿಯನ್‌ ಪಟ್ಟದ ಶುಭ ಸೂಚಕವೆನ್ನಬಹುದು. ಏಕೆಂದರೆ ಕಳೆದ ಎರಡು ವಿಶ್ವಕಪ್​ಗಳಲ್ಲಿ ಟೀಂ ಇಂಡಿಯಾ ತನ್ನ ಮೊದಲ ಸೋಲನ್ನು ಇದೇ ದಕ್ಷಿಣ ಆಫ್ರಿಕಾ ವಿರುದ್ಧ ಎದುರಿಸಿತ್ತು. ಆದರೆ ಕಾಕತಾಳೀಯವೆಂಬಂತೆ ಆ ಎರಡು ವಿಶ್ವಕಪ್‌ಗಳನ್ನು ಭಾರತ ಗೆದ್ದುಕೊಂಡಿದೆ (PC- BCCI X).

2 / 5
ಮೊದಲಿಗೆ 2025 ರಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ ಅನ್ನು ನೋಡುವುದಾದರೆ.. ಆತಿಥೇಯ ಭಾರತ ತಂಡವು, ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಮೊದಲ ಸೋಲನ್ನು ಅನುಭವಿಸಿತ್ತು. ಆದರೆ ಅದರ ನಂತರ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಭಾರತ ಮಹಿಳಾ ತಂಡವು ಫೈನಲ್‌ನಲ್ಲಿ ಇದೇ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಆಯಿತು.

3 / 5
ಇದಾದ ನಂತರ ಅಂದರೆ 2026 ರ ಪುರುಷರ ಟಿ20 ವಿಶ್ವಕಪ್​ನಲ್ಲಿಯೂ ಇದೇ ಘಟನೆ ಪುನಾರವರ್ತಿಸಿತು. ಈ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತ ತಂಡದ ಮೊದಲ ಸೋಲು, ದಕ್ಷಿಣ ಆಫ್ರಿಕಾ ತಂಡದ ವಿರುದ್ಧವೇ ಆಗಿತ್ತು. ಆದಾಗ್ಯೂ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಟ್ರೋಫಿಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಯಿತು.

4 / 5
ಇದೀಗ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿ ಆಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸೋಲು ಪಂದ್ಯಾವಳಿಯಲ್ಲಿ ಭಾರತದ ಮೊದಲ ಸೋಲಾಗಿದೆ. ಆದ್ದರಿಂದ, ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತೊಮ್ಮೆ ವಿಭಿನ್ನ ಸ್ವರೂಪದಲ್ಲಿ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿದರೆ ಆಶ್ಚರ್ಯವೇನಿಲ್ಲ (PC- BCCI X).

5 / 5
Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ

ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ

ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ

ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ

ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು