- TV9 Kannada Kannada News Photos Cricket Photos Harmanpreet Kaur Overtakes Alyssa Healy for Historic T20I Record
ಭಾರತೀಯ ಪಿಚ್ನಲ್ಲಿ ಹೊಸ ಇತಿಹಾಸ ಬರೆದ ಹರ್ಮನ್ಪ್ರೀತ್ ಕೌರ್
ಝಿಂಬಾಬ್ವೆ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಕೊನೆಯ ಪಂದ್ಯದಲ್ಲಿ ಅಬ್ಬರಿಸಿದ ಹರ್ಮನ್ಪ್ರೀತ್ ಕೌರ್ ಕೇವಲ 41 ಎಸೆತಗಳಲ್ಲಿ ಅಜೇಯ 91 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಹರ್ಮನ್ಪ್ರೀತ್ ಭಾರತೀಯ ಪಿಚ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.
Updated on: Oct 21, 2026 | 9:03 AM

ಭಾರತೀಯ ಪಿಚ್ನಲ್ಲಿ ಹರ್ಮನ್ಪ್ರೀತ್ ಕೌರ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಸ್ಫೋಟಕ 91 ರನ್ಗಳಿಸುವ ಮೂಲಕ. ಈ 91 ರನ್ಗಳೊಂದಿಗೆ ಹರ್ಮನ್ಪ್ರೀತ್ ಕೌರ್ ಭಾರತೀಯ ಪಿಚ್ನಲ್ಲಿ ಭರ್ಜರಿ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಸಹ ಆಸ್ಟ್ರೇಲಿಯನ್ ಆಟಗಾರ್ತಿಯ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. (PC: Gettyimages)

ರಾಯ್ಪುರದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹರ್ಮನ್ಪ್ರೀತ್ ಕೌರ್ ಹೊಡಿಬಡಿ ಆಟದೊಂದಿಗೆ ಕೇವಲ 41 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 10 ಫೋರ್ಗಳೊಂದಿಗೆ ಅಜೇಯ 91 ರನ್ ಬಾರಿಸಿದರು. (PC: Gettyimages)

ಈ 91 ರನ್ಗಳೊಂದಿಗೆ ಹರ್ಮನ್ಪ್ರೀತ್ ಕೌರ್ ಭಾರತೀಯ ಪಿಚ್ನಲ್ಲಿ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕಿ ಅಲಿಸ್ಸಾ ಹೀಲಿ ಹೆಸರಿನಲ್ಲಿತ್ತು. (PC: Gettyimages)

2012 ರಲ್ಲಿ ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸ ಕೈಗೊಂಡಿದ್ದಾಗ, ವಿಶಾಖಪಟ್ಟಣಂನಲ್ಲಿ ನಡೆದ ಮಹಿಳಾ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಆರಂಭಿಕ ಆಟಗಾರ್ತಿಯಾಗಿ ಕಣಕ್ಕಿಳಿದಿದ್ದ ಅಲಿಸ್ಸಾ ಹೀಲಿ, ಭಾರತೀಯ ಬೌಲರ್‌ಗಳನ್ನು ಮನಬಂದಂತೆ ಕಾಡಿ ಕೇವಲ 61 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 90 ರನ್ ಚಚ್ಚಿದ್ದರು. ಈ ಮೂಲಕ ಭಾರತದಲ್ಲಿ ಗರಿಷ್ಠ ವೈಯುಕ್ತಿಕ ಸ್ಖೋರ್ಗಳಿಸಿದ ಮಹಿಳಾ ಬ್ಯಾಟರ್ ಎನಿಸಿಕೊಂಡಿದ್ದರು. (PC: Gettyimages)

ಇದೀಗ 14 ವರ್ಷಗಳ ಬಳಿಕ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಹರ್ಮನ್ಪ್ರೀತ್ ಕೌರ್ ಯಶಸ್ವಿಯಾಗಿದ್ದಾರೆ. ಝಿಂಬಾಬ್ವೆ ವಿರುದ್ಧ ಕೇವಲ 41 ಎಸೆತಗಳಲ್ಲಿ ಅಜೇಯ 91 ರನ್ ಬಾರಿಸುವ ಮೂಲಕ ಹರ್ಮನ್ಪ್ರೀತ್ ಕೌರ್ ಭಾರತೀಯ ಪಿಚ್ನಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ಮಹಿಳಾ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More