IND vs PAK: ಮಾಜಿ ನಾಯಕಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹಾಲಿ ನಾಯಕಿ ಹರ್ಮನ್

Updated on: Jun 14, 2026 | 10:03 PM

Harmanpreet Kaur Surpasses Mithali Raj: ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. 36 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದ ಅವರು, ಮಿಥಾಲಿ ರಾಜ್ ಅವರ ದಾಖಲೆಯನ್ನು ಮುರಿದು, ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡರು. ಈ ಸಾಧನೆಯು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅವರ ಸ್ಥಾನವನ್ನು ಭದ್ರಪಡಿಸಿದೆ.

1 / 5
ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ 36 ರನ್​​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ಈ ಪಂದ್ಯದಲ್ಲಿ ಒಂದು ರನ್ ಬಾರಿಸಿದ ಕೂಡಲೇ ಹರ್ಮನ್‌ಪ್ರೀತ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ (PC- BCCI Women X).

2 / 5
ಇಲ್ಲಿಯವರೆಗೆ, ಮಹಿಳಾ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಮಾಜಿ ನಾಯಕಿ ಮತ್ತು ದಾಖಲೆ ರಾಣಿ ಮಿಥಾಲಿ ರಾಜ್ ಅವರ ಹೆಸರಿನಲ್ಲಿತ್ತು. ಹಲವಾರು ವರ್ಷಗಳಿಂದ ಹಾಗೆಯೇ ಉಳಿದಿದ್ದ ಆ ಅಪರೂಪದ ದಾಖಲೆಯನ್ನು ಈಗ ಹಾಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ತಮ್ಮ ಸ್ಥಿರ ಪ್ರದರ್ಶನದಿಂದ ಹಿಂದಿಕ್ಕಿದ್ದಾರೆ (PC- BCCI Women X).

3 / 5
ಈ ಪಂದ್ಯಕ್ಕೂ ಮುನ್ನ ಮಿಥಾಲಿ ರಾಜ್ ಮತ್ತು ಹರ್ಮನ್‌ಪ್ರೀತ್ ಕೌರ್ ತಲಾ 726 ರನ್‌ಗಳೊಂದಿಗೆ ಸಮಬಲ ಸಾಧಿಸಿದ್ದರು. ಇದೀಗ ಪಾಕ್ ವಿರುದ್ಧ 1 ರನ್ ಬಾರಿಸಿದ ಕೂಡಲೇ ಹರ್ಮನ್‌ಪ್ರೀತ್, ಮಿಥಾಲಿ ರಾಜ್ ಅವರನ್ನು ಹಿಂದಿಕ್ಕಿ ಈ ವಿಶೇಷ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ. ಸ್ಮೃತಿ ಮಂಧಾನ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ (PC- PTI).

4 / 5
ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಅವರು 35 ಎಸೆತಗಳಲ್ಲಿ ನಾಲ್ಕು ಬೌಂಡರಿ ಸೇರಿದಂತೆ 36 ರನ್ ಗಳಿಸಿದರು. ಅವರು ಕ್ರೀಸ್‌ಗೆ ಬಂದಾಗ, ತಂಡವು ಕೇವಲ 18 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ನಂತರ ಅವರು ಸ್ಮೃತಿ ಮಂಧಾನ ಅವರೊಂದಿಗೆ ತಂಡದ ಇನ್ನಿಂಗ್ಸ್ ಸ್ಥಿರಗೊಳಿಸಿದರು (PC- PTI).

5 / 5
ಮಹಿಳಾ ಟಿ20 ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯಿಂದಲೂ ಹರ್ಮನ್‌ಪ್ರೀತ್ ಕೌರ್ ಆಡುತ್ತಿದ್ದಾರೆ, ಇದು ಅವರ 40 ನೇ ಪಂದ್ಯ. ಟಿ20 ವಿಶ್ವಕಪ್‌ನ ಪ್ರತಿ ಆವೃತ್ತಿಯಲ್ಲೂ ಆಡಿದ ಕೆಲವೇ ಆಟಗಾರ್ತಿಯರಲ್ಲಿ ಒಬ್ಬರಾಗಿರುವ ಹರ್ಮನ್ ತಮ್ಮ ವಿಶ್ವಕಪ್ ವೃತ್ತಿಜೀವನದಲ್ಲಿ ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ (PC- PTI).

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us