Harry Brook: ಬೂಮ್ ಬೂಮ್ ಬ್ರೂಕ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸ್ಪೋಟಕ ದಾಂಡಿಗ
TV9 Web | Updated By: ಝಾಹಿರ್ ಯೂಸುಫ್
Updated on:
Jul 09, 2023 | 8:33 PM
Harry Brook Records: ಇಂಗ್ಲೆಂಡ್ ಪರ ಇದುವರೆಗೆ 10 ಟೆಸ್ಟ್ ಪಂದ್ಯಗಳನ್ನಾಡಿರುವ ಹ್ಯಾರಿ ಬ್ರೂಕ್ 1028 ರನ್ ಕಲೆಹಾಕಿದ್ದಾರೆ. ಈ ವೇಳೆ 4 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ.
1 / 6
Ashes 2023: ಲೀಡ್ಸ್ನ ಹೆಡಿಂಗ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ನ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
2 / 6
ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 75 ರನ್ ಬಾರಿಸುವ ಮೂಲಕ ಹ್ಯಾರಿ ಬ್ರೂಕ್ ಟೆಸ್ಟ್ ಕ್ರಿಕೆಟ್ನಲ್ಲಿ 1000 ರನ್ ಪೂರೈಸಿದರು. ಅದು ಕೂಡ ಅತ್ಯಂತ ಕಡಿಮೆ ಎಸೆತಗಳ ಮೂಲಕ ಎಂಬುದು ವಿಶೇಷ.
3 / 6
ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿ ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ಇದೀಗ ಸ್ಪೋಟಕ ದಾಂಡಿಗ ಹ್ಯಾರಿ ಬ್ರೂಕ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕಾಲಿನ್ ಡಿ ಗ್ರ್ಯಾಂಡ್ಹೋಮ್ ಹೆಸರಿನಲ್ಲಿತ್ತು.
4 / 6
ನ್ಯೂಝಿಲ್ಯಾಂಡ್ ತಂಡದ ಮಾಜಿ ಆಟಗಾರ ಕಾಲಿ ಡಿ ಗ್ರ್ಯಾಂಡ್ಹೋಮ್ 1140 ಎಸೆತಗಳಲ್ಲಿ 1000 ರನ್ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದರು.
5 / 6
ಇದೀಗ ಕೇವಲ 1058 ಎಸೆತಗಳಲ್ಲಿ 1000 ರನ್ ಬಾರಿಸಿರುವ ಹ್ಯಾರಿ ಬ್ರೂಕ್, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
6 / 6
ಇಂಗ್ಲೆಂಡ್ ಪರ ಇದುವರೆಗೆ 10 ಟೆಸ್ಟ್ ಪಂದ್ಯಗಳನ್ನಾಡಿರುವ ಹ್ಯಾರಿ ಬ್ರೂಕ್ 1028 ರನ್ ಕಲೆಹಾಕಿದ್ದಾರೆ. ಈ ವೇಳೆ 4 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅಂದರೆ ಹ್ಯಾರಿ ಬ್ರೂಕ್ ಇಂಗ್ಲೆಂಡ್ ಪರ ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ 94 ರ ಸ್ಟ್ರೈಕ್ ರೇಟ್ನಲ್ಲಿ ರನ್ಗಳಿಸುತ್ತಾ ಬಂದಿದ್ದಾರೆ. ಹೀಗಾಗಿಯೇ ಬ್ರೂಕ್ ಅವರನ್ನು ಡೇಂಜರಸ್ ಬ್ಯಾಟರ್ ಎಂದು ಪರಿಗಣಿಸಲಾಗುತ್ತದೆ.
Published On - 8:31 pm, Sun, 9 July 23